ಅರ್ಹರ ಖಾತೆಗೆ ಹಣ ಜಮಾ ಆಗಲಿ

ಬಸವಕಲ್ಯಾಣ ತಾಪಂ ಸಭಾಂಗಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ನೀಲಕಂಠ ರಾಠೋಡ್​  ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಮಹ್ಮದ್​ ಸಲೀಂ, ರಾಜರೆಡ್ಡಿ ಪಾಟೀಲ್​ ಇದ್ದರು.
ಬಸವಕಲ್ಯಾಣ ತಾಪಂ ಸಭಾಂಗಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ನೀಲಕಂಠ ರಾಠೋಡ್​ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಮಹ್ಮದ್​ ಸಲೀಂ, ರಾಜರೆಡ್ಡಿ ಪಾಟೀಲ್​ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನೀಲಕಂಠ ರಾಠೋಡ್​ ತಾಕೀತು
  • ಕಲ್ಯಾಣದಲ್ಲಿ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆ
ಬಸವಕಲ್ಯಾಣ: ಗೃಹ ಲಕ್ಷ್ಮಿ ಫಲಾನುಭವಿಗಳು ಮರಣ ಹೊಂದಿದ ನಂತರವು ಕೆಲವರ ಖಾತೆಗೆ ಹಣ ಜಮಾ ಆಗುತ್ತಿರುವುದು ಗಮನಕ್ಕೆ ಬಂದಿದೆ. ನಿಯಮ ಮೀರಿ ಹಣ ಪಡೆದುಕೊಳ್ಳುತ್ತಿರುವರನ್ನು ಗುರುತಿಸಿ ಅಂಥವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ನೀಲಕಂಠ ರಾಠೋಡ್​ ಸೂಚಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಕರೆದಿದ್ದ ತಾಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವಂತೆ ಕ್ರಮ ಕೈಗೊಳ್ಳಬೇಕು. ಸರ್ಕಾರದ ಹಣ ದುರುಪಯೋಗ ಆಗಲು ಅವಕಾಶ ನೀಡಬಾರದು ಎಂದರು.
ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಡಿ ನಡೆಯುತ್ತಿರುವ ನ್ಯಾಯ ಬೆಲೆ ಅಂಗಡಿಗಳು ಸಾರ್ವಜನಿಕರ ಅನುಕೂಲವಾಗುವ ಸ್ಥಳದಲ್ಲಿ ಇರಬೇಕು ಮತ್ತು ವೇಳಾ ಪಟ್ಟಿಯಂತೆ ಜನರಿಗೆ ಆಹಾರ ವಿತರಣೆ ಮಾಡಬೇಕು. ಜನರಿಗೆ ಯಾವುದೇ ತೊಂದರೆ ಅಗದಂತೆ ನೋಡಿಕೊಳ್ಳಬೇಕು. ಗ್ಯಾರಂಟಿ ಯೋಜನೆಗಳು ಬಡವರಿಗಾಗಿ ಸರ್ಕಾರದಿಂದ ಜಾರಿಗೆ ಮಾಡಲಾಗದೆ. ಹೀಗಾಗಿ ಸಾಧ್ಯವಾದಷ್ಟು ಅವರಿಗೆ ಅನಕೂಲವಾಗುವಂತೆ ಮಾಡಬೇಕು ಎಂದು ಹೇಳಿದರು.
ತಾಪಂ ಸಹಾಯಕ ನಿರ್ದೇಶಕ ಮಹ್ಮದ್​ ಸಲೀಂ, ವ್ಯವಸ್ಥಾಪಕ ರಾಜರೆಡ್ಡಿ ಪಾಟೀಲ್​, ಗ್ಯಾರಂಟಿ ಯೋಜನೆ ಅಧಿಕಾರಿ ಹಾಗೂ ಸದಸ್ಯರು ಇದ್ದರು.
=====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net