ಬಡವರು ಶಿಕ್ಷಣದಿಂದ ವಂಚಿತರಾಗದಿರಲಿ

Let the poor not be deprived of education.
Let the poor not be deprived of education.
Published on
ಬೇತಮಂಗಲ: ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿ ವಂಚಿತವಾಗಬಾರದು ಎಂಬ ಉದ್ದೇಶದಿಂದ ಆರ್​.ಕೆ.ಫೌಂಡೇಶನ್​ನಿಂದ ಸತತ 9ನೇ ವರ್ಷವೂ ಶಾಲಾ ಮಕ್ಕಳಿಗೆ ಉಚಿತ ನೋಟ್​ ಪುಸ್ತಕ ವಿತರಣೆ ಮಾಡಲಾಗುತ್ತಿದೆ ಎಂದು ೌಂಡೇಶನ್​ ಅಧ್ಯಕ್ಷ ಮೋಹನ್​ ಕೃಷ್ಣ ತಿಳಿಸಿದರು.
ಸುಂದರಪಾಳ್ಯದ ಕರ್ನಾಟಕ ಪಬ್ಲಿಕ್​ ಶಾಲೆ, ಗ್ರೀನ್​ ವುಡ್ಸ್​ ಇಂಟರ್​ನ್ಯಾಷನಲ್​ ಶಾಲೆ, ಶ್ರೀ ವೆಂಕಟೇಶ್ವರ ಇಂಟರ್​ನ್ಯಾಷನಲ್​ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್​ ಪುಸ್ತಕ ವಿತರಿಸಿ ಮಾತನಾಡಿ, ಕಳೆದ 9 ವರ್ಷದಿಂದ ಕ್ಷೇತ್ರದಲ್ಲಿ ವಿವಿಧ ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ.
ಯಾವುದೇ ರಾಜಕೀಯ ಉದ್ದೇಶದಿಂದ ಸೇವೆ ಮಾಡುತ್ತಿಲ್ಲ. ಬದಲಾಗಿ ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ನೋಟ್​ ಪುಸ್ತಕ ವಿತರಿಸಲಾಗುತ್ತಿದೆ. ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಿಸಿಕೊಂಡು ವಿದ್ಯಾಭ್ಯಾಸ ಮಾಡಬೇಕು ಎಂದರು.
ಮುಖಂಡರಾದ ಸುಧಾಕರ್​ ರೆಡ್ಡಿ, ಶ್ರೀನಿವಾಸ್​ ರೆಡ್ಡಿ, ಚನ್ನಾಮೂರ್ತಿ, ಬಾಬುರೆಡ್ಡಿ, ಪೆದ್ದಣ್ಣ ಇದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net