ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿ

ಅಜ್ಜೀಪುರದ ಬಳಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ಶಾಸಕ ಎಂ.ಆರ್ ಮಂಜುನಾಥ್ ಪರಿಶೀಲಿಸಿದರು. ನಂದೀಪ್, ಮಂಜೇಶ್, ಮಹಾದೇವ ಇತರರು ಇದ್ದರು.
ಅಜ್ಜೀಪುರದ ಬಳಿ ಕೈಗೊಂಡಿರುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ಶಾಸಕ ಎಂ.ಆರ್ ಮಂಜುನಾಥ್ ಪರಿಶೀಲಿಸಿದರು. ನಂದೀಪ್, ಮಂಜೇಶ್, ಮಹಾದೇವ ಇತರರು ಇದ್ದರು.
Published on
ಹನೂರು: ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಜತೆಗೆ ಶೀಘ್ರ ಪೂರ್ಣಗೊಳಿಸುವಂತೆ ಶಾಸಕ ಎಂ.ಆರ್ .ಮಂಜುನಾಥ್ ಸೂಚಿಸಿದರು.

ತಾಲೂಕಿನ ಅಜ್ಜೀಪುರದ ಬಳಿ ಆರಂಭಿಸಿರುವ ರಸ್ತೆ ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಮಹದೇಶ್ವರ ಬೆಟ್ಟ, ಬಂಡಳ್ಳಿ ಲೊಕ್ಕನಹಳ್ಳಿ ಸೇರಿದಂತೆ ಇನ್ನಿತರೆ ಭಾಗದ ಮುಖ್ಯ ರಸ್ತೆಗಳು ಹಾಳಾಗಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ತುಂಬಾ ತೊಡುಕಾಗಿ ಪರಿಣಿಸಿತ್ತು. ಇದರಿಂದ ಸಾರ್ವಜನಿಕರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದರು. ಇದನ್ನು ಮನಗಂಡು ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ರಾಮಾಪುರ ಮಾರ್ಗದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ಅಜ್ಜೀಪುರದ ಬಳಿ ಕಾಮಗಾರಿ ಸ್ಥಗಿತಗೊಂಡಿತ್ತು. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಬಗ್ಗೆ ಸಂಬಂಧಪಟ್ಟವರಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಇದೀಗ ಕಾಮಗಾರಿಯನ್ನು ಆರಂಭಿಸಲಾಗಿದೆ. ಆದ್ದರಿಂದ ನಿರ್ಮಾಣ ಜವಾಬ್ದಾರಿ ಹೊತ್ತವರು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದರ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಜತೆಗೆ ಕಾಮಗಾರಿಯ ವೇಳೆ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯ ಮುತುರ್ವಜಿ ವಹಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಗುತ್ತಿಗೆದಾರ ನಂದೀಪ್ ಮುಖಂಡರಾದ ಮಂಜೇಶ್, ವಿಜಯಕುಮಾರ್, ಮಹದೇವ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net