ರಾಜ್ಯದ ಜನರ ಹಿತಕ್ಕೆ ಇರಲಿ ಮೊದಲ ಆದ್ಯತೆ pressmeet

ಸುದ್ದಿಗೋಷ್ಠಿಯಲ್ಲಿ pressmeet ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕರಾದ ಮಸಾಲಾ ಜಯರಾಮ್​, ಎಂ.ಡಿ.ಲಕ್ಷಿ$್ಮನಾರಾಯಣ್​ ಇದ್ದರು.
ಸುದ್ದಿಗೋಷ್ಠಿಯಲ್ಲಿ pressmeet ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕರಾದ ಮಸಾಲಾ ಜಯರಾಮ್​, ಎಂ.ಡಿ.ಲಕ್ಷಿ$್ಮನಾರಾಯಣ್​ ಇದ್ದರು.
Published on

ತುರುವೇಕೆರೆ:

ತಾಲೂಕಿನಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಕೆರೆ ಕಟ್ಟೆಗಳು ಬತ್ತಿ

pressmeet

ಹೋಗಿವೆ. ಅಂತರ್ಜಲ ಮಟ್ಟ ಕುಸಿದು ಬೋರ್​ವೆಲ್​ಗಳಲ್ಲಿ ಕುಸಿದಿದೆ. ಕೂಡಲೇ ತುರುವೇಕೆರೆ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿವಿಧ ಬೇಡಿಕೆ
ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಜೆಡಿಎಸ್​ ಮತ್ತು ಬಿಜೆಪಿಯಿಂದ ಆ.10ರಂದು ಹೇಮಾವತಿ ಕಚೇರಿ ಮುಂಭಾಗ ಅಹೋ ರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯದ ಬಹುಪಾಲು ಡ್ಯಾಂಗಳು ನೀರಿಲ್ಲದೇ ಬಣಗುಡುತ್ತಿವೆ. ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮ ಖಂಡನೀಯ. ರಾಜ್ಯದ ಜನತೆಯ ಹಿತಕ್ಕೆ ಮೊದಲು ಆದ್ಯತೆ ನೀಡಬೇಕು. ರಾಜ್ಯದ ಎಲ್ಲ ಕೆರೆ ಕಟ್ಟೆಗಳನ್ನು ತುಂಬಿಸಿದ ನಂತರ ತಮಿಳುನಾಡಿಗೆ ನೀರು ಹರಿಸಲಿ ಎಂದು ಹೇಳಿದರು.
ಜಿಲ್ಲೆಯ ರೈತರ ಪಾಲಿಗೆ ಮಾರಕವಾಗಿರುವ ಎಕ್ಸ್​ಪ್ರೆಸ್​ ಕೆನಾಲ್​ ಕಾಮಗಾರಿಯನ್ನು ಕೂಡಲೇ ತಡೆ ಹಿಡಿಯಬೇಕು. ಯಾವುದೇ ಕಾರಣಕ್ಕೂ ಅದನ್ನು ಮುಂದುವರೆಸಬಾರದು. ಈ ಕುರಿತು ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದು ಮುಖಂಡರು ಆಗ್ರಹಿಸಿದರು.
ಮಾಜಿ ಶಾಸಕ ಮಸಾಲಾ ಜಯರಾಮ್​ ಮಾತನಾಡಿ, ತಾಲೂಕಿನಲ್ಲಿ ಮಳೆ ಇಲ್ಲದೇ ಜಾನುವಾರುಗಳಿಗೆ ಹಸಿರು ಮೇವು ಕೂಡ ಇಲ್ಲದಂತಾಗಿದೆ. ಕೂಡಲೇ ಗೋಶಾಲೆಗಳನ್ನು ತೆರೆಯಬೇಕು. ಗೋವುಗಳಿಗೆ ಮೇವು ಒದಗಿಸಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಹಿರಿಯ ರೈತ ಮುಖಂಡ ಅರಳೀಕೆರೆ ಶಿವಯ್ಯ ತಾಲೂಕಿನ ಪ್ರಮುಖ ಕೆರೆ ಕಟ್ಟೆಗಳ ಸಾಂದ್ರತೆ ಮತ್ತು ಬಳಕೆಯ ಬಗ್ಗೆ ಸಭೆಗೆ ವಿವರ ನೀಡಿದರು. ಈ ವೇಳೆ ಜೆಡಿಎಸ್​ನ ತಾಲೂಕು ಅಧ್ಯಕ್ಷ ಸಾರಿಗೇಹಳ್ಳಿ ದೊಡ್ಡೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್​ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net