ಮುಳಬಾಗಿಲು : ನಗರದ ಹೊರವಲಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರ ಒಳಸೇತುವೆ ಮತ್ತು ಮೇಲ್ ಸೇತುವೆ ನಿಮಾರ್ಣ ಕಾಮಗಾರಿ ಹಲವು ವರ್ಷಗಳಿಂದ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಕೂಡಲೇ ಕಾಮಗಾರಿಗೆ ವೇಗ ನೀಡಿ ಜನಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ನಗರದ ಹೊರವಲಯದ ತಾಯಲೂರು ರಸ್ತೆಯ ಬೈಪಾಸ್ನಲ್ಲಿ ಬುಧವಾರ ರೈತ ಸಂಘದ ಪದಾಧಿಕಾರಿಗಳು ಹೆದ್ದಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದರು. started