ನಶಾಮುಕ್ತ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಸಂಕಲ್ಪ ಕುರಿತು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ಅಧ್ಯಕ್ಷ ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಕೆ.ಎಂ.ರಮೇಶ್ ಮಾತನಾಡಿದರು. ಸೋಮವಾರಪೇಟೆ ತಾಲೂಕು ಅಧ್ಯಕ್ಷ ಡೆನ್ಜಿಲ್ ವರ್ಗೀಸ್, ಎಸ್‌ಡಿಎಂಸಿ ಅಧ್ಯಕ್ಷ ಎಚ್.ಪಿ.ಸೈದಾಲವಿ, ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಡಿ.ಯು.ಬಿಂದುಕುಮಾರಿ, ಶಿಕ್ಷಕರಾದ ಕೆ.ಬಿ.ರಾಧಾಕೃಷ್ಣ, ಪಿ.ಎಚ್.ರಜಿಯಾ, ಆರ್.ಯಶೋರಾಣಿ, ಕೆ.ಎಚ್.ಗಾಯಿತ್ರಿ, ಅತಿಥಿ ಶಿಕ್ಷಕರಾದ ಎನ್.ಪಿ.ವಾಣಿಶ್ರೀ , ಪಿ ಆರ್.ವಿಮಲಾ ಇದ್ದರು.