ಕನಕಪುರ ತಾಲೂಕಿನ ರೂರಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರವನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ವಿ ಮಧುಸೂದನ ರಾಮ್ ಉದ್ಘಾಟಿಸಿದರು. ರೂರಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಚ್.ಕೆ.ಶ್ರೀಕಂಠಮ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಎಸ್ ಕೆಂಪೇಗೌಡ, ಉಪಪ್ರಾಂಶುಪಾಲ ಡಾ.ಅಪ್ಪಾಜಿ, ಐಕ್ಯೂಎಸಿ ಸಂಯೋಜಕ ಡಾ. ಎ.ಪಿ.ಪ್ರಕಾಶ್ ಇದ್ದರು.
Published on:
Copied
Follow Us
ಕನಕಪುರ :
ಯುವ ಜನಾಂಗ ಮಾದಕ ವಸ್ತುಗಳಿಂದ ದೂರವಿದ್ದು, ಶೈಕ್ಷಣಿಕ ಹಾಗೂ ಕೌಟುಂಬಿಕ ಜೀವನವನ್ನು ಉತ್ತಮ ರೀತಿಯಲ್ಲಿ ಸಾಗಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ವಿ ಮಧುಸೂದನ ರಾಮ್ ತಿಳಿಸಿದರು.
ನಗರದ ರೂರಲ್ ಕಾಲೇಜಿನ ದೂಂತೂರು ಮಾರೇಗೌಡ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಐ.ಕ್ಯೂ.ಎ.ಸಿ ಹಾಗೂ ಐ.ಸಿ.ಸಿ.ಸೆಲ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಮಾದಕ ದ್ರವ್ಯ ಸೇವನೆ ಹಾಗೂ ಲೈಂಗಿಕ ದೌರ್ಜನ್ಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾದಕ ದ್ರವ್ಯಗಳ ಸೇವನೆಯಿಂದ ಯುವ ಪೀಳಿಗೆಯ ಭವಿಷ್ಯ ಹಾಳಾಗುತ್ತಿದ್ದು, ಕಾಲೇಜು ದಿನಗಳಲ್ಲಿಯೇ ಇದರ ವಿರುದ್ಧ ದೃಢ ನಿರ್ಧಾರ ತೆಗೆದುಕೊಳ್ಳಬೇಕು,
ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ರೇಂಜರ್ ಮತ್ತು ರೋವರ್ಸ್, ಯೂತ್ ರೆಡ್ ಕ್ರಾಸ್, ಕ್ರೀಡೆ, ಸಾಂಸ್ಕೃತಿಕ ಮತ್ತು ಶಿಕ್ಷಣದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳವ ಮೂಲಕ ಶಿಸ್ತುಬದ್ಧ ಮತ್ತು ಆರೋಗ್ಯಕರ ಜೀವನ ನಡೆಸುವಂತೆ ಹೇಳಿದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ. ಜಗದೀಶ್ ಮಾತನಾಡಿ, ಯುವ ಸಮುದಾಯ ಮಾದಕ ವಸ್ತುಗಳಿಂದ ದೂರವಿಟ್ಟು, ಅವರು ಹಾದಿ ತಪ್ಪದಂತೆ ಜಾಗೃತಿ ಮೂಡಿಸಲು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿದೆ. ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕರ್ನಾಟಕದಲ್ಲಿ ಮಾದಕ ದ್ರವ್ಯಗಳನ್ನು ನಿಗ್ರಹಿಸಲು ಮಾದಕ ವ್ಯಸನಿಗಳಿಗೆ ಕಾನೂನು ಸೇವೆಗಳನ್ನು ಒದಗಿಸುವುದು ಹಾಗೂ ಮಾದಕ ವ್ಯಸನ ನಿರ್ಮೂಲನೆಗೆ ಯೋಜನೆಗೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲಾಗಿದೆ ಎಂದರು.
ಡಾ. ಕೆ.ಸಿ. ಗೋಪಾಲಗೌಡ ಪೋಕ್ಸೋ ಕಾಯ್ದೆ 2012 ಮತ್ತು ಲೈಂಗಿಕ ದೌರ್ಜನ್ಯದ ವಿರುದ್ಧದ ಕಾನೂನು ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.