ಪಟ್ಟಣದ ರಾಜರಾಜೇಶ್ವರಿ ಆಯುರ್ವೇದ ವೈದ್ಯಕಿಯ ಮಹಾವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜರಾಜೇಶ್ವರಿ ಆಯುರ್ವೇದ ವೈದ್ಯಕಿಯ ಮಹಾವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಮಾನವ ಕಳ್ಳಸಾಗಣೆ ವಿರೋಧಿ ದಿನ, ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನ, ಸಮರ್ಥ ಯುವ ಜನತೆ, ಸಶಕ್ತ ಭಾರತ ಹಾಗೂ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾದಕ ವಸ್ತುಗಳ ಸೇವನೆಯಿಂದ ಯುವಕರ ಭವಿಷ್ಯ ಹಾಳಾಗುವುದಲ್ಲದೆ, ಕುಟುಂಬ ಹಾಗೂ ಸಮಾಜದ ಮೇಲೂ ದುಷ್ಪರಿಣಾಮ ಬೀರುತ್ತದೆ. ಮಾನವ ಕಳ್ಳಸಾಗಣೆ ಗಂಭೀರ ಅಪರಾಧವಾಗಿದ್ದು, ಇಂತಹ ಕೃತ್ಯಗಳ ಬಗ್ಗೆ ಯುವಜನತೆ ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದರು.