ದೇಶದ ಪ್ರಗತಿಗೆ ಕೊಡುಗೆ ನೀಡಲಿ

ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ಮಟ್ಟದ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಜಿ.ವೆಂಕಟೇಶ್  ಉದ್ಘಾಟಿಸಿದರು.ಕಸಾಪ ತಾಲೂಕು ಅಧ್ಯಕ್ಷ ತಿ.ನಾ.ಪದ್ಮನಾಭ,  ಕಾಂಗ್ರೆಸ್ ಮುಖಂಡ  ಬಿ.ಎಸ್. ಕುಮಾರ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶ್ರೀದೇವಿ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದೇವರಾಜು, ಪ್ರಾಂಶುಪಾಲ ನರಸಿಂಹಮೂರ್ತಿ ಇದ್ದರು.

Published on

ಮಾಗಡಿ :

ದೈಹಿಕ ಸದೃಢತೆಯಿಂದ ಮಾನಸಿಕ ಏಕಾಗ್ರತೆ ಹಾಗೂ ಯಶಸ್ಸು ಸಾಧ್ಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಜಿ.ವೆಂಕಟೇಶ್ ತಿಳಿಸಿದರು.

ತಾಲೂಕಿನ ತಿಪ್ಪಸಂದ್ರ ಹೋಬಳಿ ಮಟ್ಟದ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯವಾಗಿದ್ದರೆ ಮಾತ್ರ ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಸಾಧಿಸಿ ಯಶಸ್ಸು ಪಡೆಯಬಹುದು. ಪ್ರತಿ ಶಾಲೆಯಲ್ಲೂ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಇಡೀ ಹೋಬಳಿಯಲ್ಲಿ ಕೇವಲ ಬೆರಳಣಿಕೆಯಷ್ಟು ದೈಹಿಕ ಶಿಕ್ಷಕರಿದ್ದು, ಎಲ್ಲ ಶಾಲೆಗಳಿಗೂ ದೈಹಿಕ ಶಿಕ್ಷಕರ ನೇಮಕವಾಗಬೇಕು ಎಂದು ಆಗ್ರಹಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು. ಸಾರ್ವಜನಿಕವಾಗಿ ಮತ್ತು ಮಕ್ಕಳ ಮುಂದೆ ಶಿಸ್ತಿನಿಂದ ನಡೆದುಕೊಳ್ಳುವುದು ಪ್ರತಿಯೊಬ್ಬ ಶಿಕ್ಷಕನ ಜವಾಬ್ದಾರಿ. ಯುವಜನ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳು, ಶಿಕ್ಷಕರು ಶ್ರದ್ಧೆಯಿಂದ ಕೆಲಸ ಮಾಡಿದಾಗ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಸಾಧ್ಯ ಎಂದರು.
ಕಸಾಪ ತಾಲೂಕು ಅಧ್ಯಕ್ಷ ತಿ.ನಾ.ಪದ್ಮನಾಭ ಮಾತನಾಡಿ, ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆ ಪ್ರೋತ್ಸಾಹಿಸಲು ಹಾಗೂ ಕ್ರೀಡಾ ಚಟುವಟಿಕೆ ಉತ್ತೇಜಿಸಲು ಮಾಗಡಿ ಹಾಗೂ ಕುದೂರು ಭಾಗಗಳಲ್ಲಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಅದೇ ಮಾದರಿಯಲ್ಲಿ ತಿಪ್ಪಸಂದ್ರ ಹೋಬಳಿಯ ಕ್ರೀಡಾಂಗಣ ಹೈಟೆಕ್ ಮಟ್ಟದಲ್ಲಿ ಅಭಿವೃದ್ಧಿಪಡಿಸಬೇಕು ಎಂದರು.
ಮುಖ್ಯ ಶಿಕ್ಷಕ ಹೇಮಂತ್, ರಾಜಣ್ಣ, ಮುಖಂಡರಾದ ಸಿಂಗ್ರಿಗೌಡ, ಟಿಎಪಿಸಿಎಂಎಸ್ ನಿರ್ದೇಶಕ ರಮೇಶ್, ಸಂಕೀಘಟ್ಟ ಚಂದ್ರಶೇಖರ್, ಪ್ರಾ.ಶಾ.ಶಿ.ಸಂಘ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಶಫಿಉಲ್ಲಾ, ಟಿ.ಕೆ.ಶ್ರೀನಿವಾಸ್, ಸಿಆರ್‌ಸಿ ಶಶಿಧರ್, ಸಿಡಿಸಿ ನಿರ್ದೇಶಕ ಸ್ವಾಮಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net