ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲಿ

Let them cultivate human values ​​alongside education.
Let them cultivate human values ​​alongside education.
Published on

ರಾಯಲ್ಪಾಡು:

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು. ಪರರಿಗೆ ಸಹಾಯ ಮಾಡುವ ಅವಕಾಶಗಳನ್ನು ಕಳೆದುಕೊಳ್ಳಬಾರದು ಎಂದು ಪ್ರಾಂಶುಪಾಲ ಪಿ.ಗಣೇಶ್​ ಸಲಹೆ ನೀಡಿದರು.

ಗ್ರಾಮದ ಕರ್ನಾಟಕ ಪಬ್ಲಿಕ್​ ಶಾಲೆಯಲ್ಲಿ ಶುಕ್ರವಾರ ಪ್ರೌಢಶಾಲಾ ವಿಭಾಗದಿಂದ 8, 9, 10ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿ, ಗುರಿ ಈಡೇರಿಸಿಕೊಳ್ಳಲು ಕಠಿಣ ಪರಿಶ್ರಮ ಅಗತ್ಯವಾಗಿದ್ದು, ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಗಳಲ್ಲೂ ಆಸಕ್ತಿ ವಹಿಸಬೇಕು. ಪರೀಕ್ಷಾ ಸಮಯದಲ್ಲಿ ಆರೋಗ್ಯದ ಕಡೆ ಕಾಳಜಿ ವಹಿಸಬೇಕು. ಎಷ್ಟೇ ಉನ್ನತ ವ್ಯಾಸಂಗಕ್ಕೆ ಹೋದರು ತಂದೆ-&ತಾಯಿ, ಒಡನಾಡಿಗಳ ಜತೆಗೆ ಉತ್ತಮ ಬಾಂಧವ್ಯ ಹೊಂದಿರಬೇಕು ಎಂದರು.
ಮುಖ್ಯಶಿಕ್ಷಕ ಶ್ರೀಶೈಲ ಹಲವಾರು ಮಾತನಾಡಿ, ವಿದ್ಯಾರ್ಥಿಗಳು ಈಗಿನಿಂದಲೇ ಜೀವನದ ಗುರಿ ಸಾಧಿಸುವ ಛಲ ಹೊಂದಿರಬೇಕು. ವಿದ್ಯಾರ್ಥಿಗೆ ವಿನಯ ಇಲ್ಲದಿದ್ದರೆ ಸಮಾಜ ಗೌರವಿಸುವುದಿಲ್ಲ. ವಿದ್ಯೆ ಇದ್ದರೆ ಸಮಾಜದಲ್ಲಿ ಒಳ್ಳೆಯ ಸ್ಥಾನ&ಮಾನ, ಗೌರವ ಸಿಗುತ್ತದೆ ಎಂದರು.
ಶಿಕ್ಷಕ ಶ್ರೀನಾಥ್​ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯಕರ ಹವ್ಯಾಸ ರೂಢಿಸಿಕೊಳ್ಳುವ ಮೂಲಕ ಕನಸು ಕಟ್ಟಿಕೊಂಡು ಶಿಕ್ಷಣ ಕೊಡಿಸುವ ಪಾಲಕರಿಗೆ ಒಳ್ಳೆಯ ಹೆಸರು ತರಬೇಕು. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದಾಗ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net