

ಮುಳಬಾಗಿಲು:
ಶಿಕ್ಷಕರ ಕುಂದು&ಕೊರತೆಗಳನ್ನು ಆಲಿಸಿ, ಶೀಘ್ರ ಪರಿಹರಿಸುವ ಮೂಲಕ ಶಿಕ್ಷಕರು ಉತ್ತಮ ವಾತಾವರಣದಲ್ಲಿ ಕಾರ್ಯನಿರ್ವಹಿಸಲು ಸಹಕಾರ ನೀಡಲಾಗುವುದು. ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಆರ್.ಶಂಕರೇಗೌಡ ಹೇಳಿದರು.