ತಾಲೂಕು ಬುಕ್ಕಾಪಟ್ಟಣ ಹೋಬಳಿಯ ಹೊಸಪಾಳ್ಯ ಶಾಲೆಯಲ್ಲಿ ಇಕೋ ಕ್ಲಬ್‌ನಿಂದ ಶುಕ್ರವಾರ ಹಮ್ಮಿಕೊಂಡಿದ್ದ ಅರಣ್ಯ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯ ಎಷ್ಟೇ ಬೆಳೆದರೂ ಸಹ ಪ್ರಕೃತಿಗಿಂತ ದೊಡ್ಡವನಾಗಲಾರ. ಪ್ರಾಣಿ, ಪಕ್ಷಿ, ಗಿಡ, ಮರ ಇವೆಲ್ಲವುಗಳ ಮೇಲೆ ಹೆಚ್ಚಿನ ಪ್ರೀತಿ, ಕಾಳಜಿ ಹೊಂದಿ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದರು.