ಮಾಲೂರು ತಾಲೂಕು ಕೊಮ್ಮನಹಳ್ಳಿ ಶಾಸಕರ ನಿವಾಸ ಬಳಿ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ 37 ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆಯಂತ್ರ ವಿತರಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬನೆಯ ಜೀವನ ಮಾಡಲು ಕಾಂಗ್ರೆಸ್ ಸರ್ಕಾರ ಜನಪರ ಯೋಜನೆ ಜಾರಿಗೆ ತಂದಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಪಾರದರ್ಶಕವಾಗಿ ನೀಡುತ್ತಿದೆ ಎಂದು ತಿಳಿಸಿದರು.