ಬಾದಾಮಿ ನಗರದ ಶಾಸಕರ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಅಂತರ್ಜಲ ಕಚೇರಿ ಹಾಗೂ ನಿರಾಣಿ ಶುಗರ್ಸ್ ಲಿಮಿಟೆಡ್ ಘಟಕ -5 ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಚಿತ್ರ ಕಲಾ ಸ್ಪರ್ಧೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಉದ್ಘಾಟಿಸಿದರು. ಬಿ.ಎಚ್. ಹಳಗೇರಿ, ಗಂಗಾಧರ ಬಡಿಗೇರ, ಕೇಶವ ರಾಠೋಡ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ ಹೇಳಿಕೆ
ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ
ಬಾದಾಮಿ: ಎಲ್ಲರೂ ಭೂಮಿ ಸಂರಕ್ಷಣೆ ಹಾಗೂ ನೀರನ್ನು ಮಿತವಾಗಿ ಬಳಸಬೇಕು. ವಿದ್ಯಾರ್ಥಿಗಳು ಎಲ್ಲರೂ ಸೇರಿ ನಮ್ಮ ಪ್ರಕೃತಿಯನ್ನು ಸಂರಕ್ಷಿಸೋಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ ಹೇಳಿದರು.
ನಗರದ ಶಾಸಕರ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಅಂತರ್ಜಲ ಕಚೇರಿ ಹಾಗೂ ನಿರಾಣಿ ಶುಗರ್ಸ್ ಲಿಮಿಟೆಡ್ ಘಟಕ-5 ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನೀರಿದ್ದರೆ ನಾಳೆ ಘೋಷ ವಾಕ್ಯದಡಿ ನಮ್ಮ ಭೂಮಿ-ನಮ್ಮ ನೀರು-ನಮ್ಮ ಶಕ್ತಿ ಎಂಬ ವಿಷಯದ ಕುರಿತು ತಾಲೂಕು ಮಟ್ಟದ ಚಿತ್ರ ಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ವಿಷಯಕ್ಕೆ ಅನುಗುಣವಾಗಿ ಚಿತ್ರವನ್ನು ಸ್ಮರಣೆಯಿಂದ ಬಿಡಿಸಿ ವಿಜೇತರಾಗುವಂತೆ ತಿಳಿಸಿದರು.
ಸಹಾಯಕ ವ್ಯವಸ್ಥಾಪಕ ಎಚ್.ಯು. ಮಜ್ಜಗಿ ಮಾತನಾಡಿ, ಚಿತ್ರ ಕಲಾ ಸ್ಪರ್ಧೆಯ ವಿಜೇತರಿಗೆ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಥಮ (5001), ದ್ವಿತೀಯ (2001), ತೃತೀಯ (1001)ರೂ. ನಗದು ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಸ್ಪರ್ಧೆಯಲ್ಲಿ ತಾಲೂಕಿನ ಆಡಗಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಆತ್ಮಾನಂದ ಕುಮಾರ ಚಿಕ್ಕೊಪ್ಪ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತಾಲೂಕು ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಬಿ.ಎಚ್. ಹಳಗೇರಿ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರ ಬಡಿಗೇರ ನಿರ್ಣಾಯಕರಾದ ಕೇಶವ ರಾಠೋಡ, ವಿ.ಎನ್. ಪಕಾಲಿ, ಕೇಶವ ರಘುವೀರ ಚಿತ್ರ ಕಲಾ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಣ ಸಂಯೋಜಕ ಬಿ.ಟಿ. ಹಳ್ಳಿ ನಿರೂಪಿಸಿ, ವಂದಿಸಿದರು.