ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಕೆ ಇರಲಿ ಮೆಚ್ಚುಗೆ

Let's appreciate the work of firefighters.
Let's appreciate the work of firefighters.
Published on
ಚಿಕ್ಕನಾಯಕನಹಳ್ಳಿ: ಅಗ್ನಿಶಾಮಕ ಸಿಬ್ಬಂದಿ ಕಾರ್ಯವೈಖರಿ ಎಲ್ಲರೂ ಮೆಚ್ಚುವಂತದ್ದು, ನಮ್ಮ ತಾಲೂಕು ವಿಶಾಲವಾದ ವಿಸ್ತೀರ್ಣಹೊಂದಿರುವುದರಿಂದ ಹುಳಿಯಾರು ಭಾಗದಲ್ಲೊಂದು ಅಗ್ನಿಶಾಮಕ ಠಾಣೆ ಪ್ರಾರಂಭಿಸಲು ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.
ಪಟ್ಟಣದ ಹೊರವಲಯದ ಅಗ್ನಿಶಾಮಕ ಠಾಣೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅಗ್ನಿಶಾಮಕ ಸೇವಾ ಸಪ್ತಾಹ ದಿನಾಚರಣೆ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಅಗ್ನಿಅವಘಡಗಳು ಸೇರಿದಂತೆ ಇತರ  ಪ್ರಕೃತಿ ವಿಕೋಪಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆಯ ಕಾರ್ಯದಲ್ಲಿ ಜೀವದ ಹಂಗನ್ನು ತೊರೆದು ಕೆಲಸ ಮಾಡುವಂತಹ ಅಗ್ನಿಶಾಮಕ ಸಿಬ್ಬಂದಿ ಕಾರ್ಯವನ್ನು ನಾವು ಮೆಚ್ಚಬೇಕಿದೆ. ಇಂತಹ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡಂತಹ ಸಿಬ್ಬಂದಿ ಆತ್ಮಕ್ಕೆ ಚಿರಶಾಂತಿ ಕೋರಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ ಎಂದರು.
ಬೇಸಿಗೆ ಅವಧಿಯಲ್ಲಿ ಹೆಚ್ಚು ಅಗ್ನಿದುರಂತಗಳು ಸಂಭವಿಸುವದರಿಂದ ಹುಳಿಯಾರು ಭಾಗಕ್ಕೆ ಹೋಗಲು ದೂರವಾಗುತ್ತದೆ ಎಂಬುದನ್ನು ಅರಿತು ಆ ಭಾಗದಲ್ಲಿ ಅಗ್ನಿಶಾಮಕ ಠಾಣೆಯನ್ನು ಪ್ರಾರಂಭಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ತಾಲೂಕು ಕೇಂದ್ರದಲ್ಲಿರುವಂತಹ ಠಾಣೆಯಲ್ಲಿ ಒಂದು ವಾಹನವಿದ್ದು, ಇನ್ನೊಂದು ವಾಹವನ್ನು ನೀಡುವಂತೆಯು ಸರ್ಕಾರಕ್ಕೆ ಮನವಿಮಾಡಲಾಗಿದೆ ಎಂದರು. 
ಅಗ್ನಿಶಾಮಕ ಸಿಬ್ಬಂದಿ ಕಾರ್ಯವೈಖರಿಯ ಬಗ್ಗೆ ಒಂದು ಪ್ರಾತ್ಯಕ್ಷಿಕೆ ನಡೆಸಿದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net