ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸೋಣ / NELAMANGAL

ನೆಲಮಂಗಲದ ಸೊಂಡೇಕೊಪ್ಪ ಮುಖ್ಯರಸ್ತೆಯ ವಿಶ್ವ ಗಾಣಿಗ ಸಮುದಾಯ ಭವನದಲ್ಲಿ ನ್ಯೂ ಸೆಂಚೂರಿ ಪಬ್ಲಿಕ್​ ಶಾಲೆಯಿಂದ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಅಕ್ಷತಾಕರ್ಣಿಕ್​, ಶಾಲಾ ಶಿಕ್ಷಕಿ ರಾಜಶ್ರೀ, ಹೇಮಾ ಇತರರು ಇದ್ದರು.
ನೆಲಮಂಗಲದ ಸೊಂಡೇಕೊಪ್ಪ ಮುಖ್ಯರಸ್ತೆಯ ವಿಶ್ವ ಗಾಣಿಗ ಸಮುದಾಯ ಭವನದಲ್ಲಿ ನ್ಯೂ ಸೆಂಚೂರಿ ಪಬ್ಲಿಕ್​ ಶಾಲೆಯಿಂದ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಅಕ್ಷತಾಕರ್ಣಿಕ್​, ಶಾಲಾ ಶಿಕ್ಷಕಿ ರಾಜಶ್ರೀ, ಹೇಮಾ ಇತರರು ಇದ್ದರು.
Published on
ನೆಲಮಂಗಲ : ವಿಜ್ಞಾನ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿರುವ ಪ್ರತಿಭೆ, ಸೃಜನಾತ್ಮಕತೆ, ವೈಜ್ಞಾನಿಕ ಮನೋಭಾವ, ಕೌಶಲ ಹೊರಹೊಮ್ಮುತ್ತದೆ ಎಂದು ಶಾಲಾ ಆಡಳಿತ ಮಂಡಳಿ ವ್ಯವಸ್ಥಾಪಕ ಟ್ರಸ್ಟಿ ಜಿ.ಮಮತಾ ಹೇಳಿದರು.
ನಗರದ ಸೊಂಡೇಕೊಪ್ಪ ಮುಖ್ಯರಸ್ತೆಯ ವಿಶ್ವ ಗಾಣಿಗ ಸಮುದಾಯ ಭವನದಲ್ಲಿ ನ್ಯೂ ಸೆಂಚೂರಿ ಪಬ್ಲಿಕ್​ ಶಾಲೆಯಿಂದ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಾತನಾಡಿ, ವಿಜ್ಞಾನಕ್ಕೆ ಸಂಬಂಧಿಸಿದ ಮಕ್ಕಳು ಮಾಡಿರುವ ನೂತನ ಮಾದರಿಗಳು ವೈಜ್ಞಾನಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಸಂದೇಹವಿಲ್ಲ ಎಂದು ಹೇಳಿದರು.
ವಿಜ್ಞಾನ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿನ ನೈಜತೆ, ಕ್ರಿಯಾತ್ಮಕ ಚಟುವಟಿಕೆ ಹಾಗೂ ಮಕ್ಕಳ ಸುಪ್ತ ಪ್ರತಿಭೆ ಅರಳುತ್ತದೆ. ಇಂದಿನ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಷಯ ಜ್ಞಾನ ಅವಶ್ಯಕ. ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ರ್ನಿಲಕ್ಷ$್ಯ ಮಾಡದೆ ಪ್ರತಿಯೊಂದು ವಿಷಯಗಳ ಕುರಿತು ಅಧ್ಯಯನ ಮಾಡಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಸಾಧಿಸಲು ಜ್ಞಾನ ಸಂಪಾದಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಕರ್ಣಿಕ್​ಗಂಗಪ್ಪ ಮಾತನಾಡಿ, ವಿಜ್ಞಾನ ವಿಷಯಗಳ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ವಿಷಯಗಳ ಬಗ್ಗೆ ಹೆಚ್ಚಿನ ಜ್ಞಾನ ಪಡೆದುಕೊಳ್ಳಲು ಸಾಧ್ಯ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಮುಂದಾಗಬೇಕು ಎಂದರು.
ವಸ್ತು ಪ್ರದರ್ಶನದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಪರಮಾಣುಗಳ ರಚನೆ, ವಾಯು ಮಾಲಿನ್ಯ ನಿಯಂತ್ರಣ, ರಕ್ತ ಗುಂಪುಗಳ ಮಾಹಿತಿ, ನೀರಿನ ಮಟ್ಟ ಸೂಚಕ, ನೀರಿನ ಶುದ್ಧೀಕರಣ, ಬೆಳೆ ಸಂರಕ್ಷಣಾ ಮಾದರಿ, ಸೋಲಾರ್​ ಟ್ರ್ಯಾಕಿಂಗ್​ ಸಿಸ್ಟಮ್​, ಮಿಶ್ರ ಬೇಸಾಯ ಸೇರಿ ವಿವಿಧ ಬಗೆಯ ಮಾದರಿ ಪ್ರದರ್ಶನ ಆಕರ್ಷಕವಾಗಿತ್ತು. ಸುಮಾರು 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಭಾಗವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net