ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಯಲಿ

ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪರಿಸರ ದಿನಾಚರಣೆಯಲ್ಲಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿದರು. ನ್ಯಾಯಾಧೀಶ ರಾಜಶೇಖರ ಹರಸೂರ, ದೇಶಭೂಷಣ ಕೌಜಲಗಿ, ಸಚಿನ್​ ಪಾಟೀಲ್​ ಇತರರಿದ್ದರು.
ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪರಿಸರ ದಿನಾಚರಣೆಯಲ್ಲಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿದರು. ನ್ಯಾಯಾಧೀಶ ರಾಜಶೇಖರ ಹರಸೂರ, ದೇಶಭೂಷಣ ಕೌಜಲಗಿ, ಸಚಿನ್​ ಪಾಟೀಲ್​ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನ್ಯಾಯಾಧೀಶ ರಾಜಶೇಖರ ಆಶಯ
  • ಕರಡ್ಯಾಳ ಗುರುಕುಲದಲ್ಲಿ ಕಾರ್ಯಕ್ರಮ
ಭಾಲ್ಕಿ: ವಿದ್ಯಾರ್ಥಿಗಳು ಸಸಿ ನೆಡುವುದರಿಂದ ಬಾಲ್ಯದಿಂದಲೇ ಪ್ರಕತಿ ಮೇಲಿನ ಪ್ರೀತಿ ಮತ್ತು ಕಾಳಜಿ ಹೆಚ್ಚಾಗುತ್ತದೆ ಎಂದು ಜೆಎಂಎ್​ಸಿ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ಹರಸೂರ ಹೇಳಿದರು.
ವಿಶ್ವ ಪರಿಸರ ದಿನ ನಿಮಿತ್ತ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ಇಲಾಖೆ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ನ್ಯಾಯವಾದಿಗಳ ಸಂ ಮತ್ತು ಚನ್ನಬಸವೇಶ್ವರ ಗುರುಕುಲ ಸಹಯೋಗದಡಿ ಶುಕ್ರವಾರ ಆಯೋಜಿಸಿದ್ದ ಸಸಿ ನೆಡುವ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಆವರಣ ಮತ್ತು ಮನೆ ಪರಿಸರದಲ್ಲಿ ಸಸಿಗಳನ್ನು ನೆಟ್ಟರಷ್ಟೇ ವಿದ್ಯಾರ್ಥಿಗಳ ಜವಾಬ್ದಾರಿ ಪೂರ್ಣಗೊಳ್ಳುವುದಿಲ್ಲ, ಪೋಷಣೆ ಸಹ ಮಾಡಬೇಕು. ಸಸಿಗೆ ನಿತ್ಯ ನೀರು ಹಾಕಿ, ಗೊಬ್ಬರ ನೀಡಿ ಮಗುವಿನಂತೆ ಆರೈಕೆ ಮಾಡಿದಾಗ ಮಾತ್ರ ಮುಂದೆ ಗಿಡ&ಮರವಾಗಿ ಬೆಳೆಯುತ್ತವೆ ಎಂದರು.
ಗಿಡಗಳನ್ನು ಕಾಳಜಿವಹಿಸಿ ರಸಿದರೆ ಮನುಷ್ಯ ಹಾಗೂ ಪ್ರಾಣಿ&ಪ ಸಂಕುಲಕ್ಕೆ ಶುದ್ಧ, ಆರೋಗ್ಯಕರ ವಾತಾವರಣ ಸಿಗಲಿದ್ದು, ಪ್ರಾಕತಿಕ ಸಮತೋಲನ ಕಾಪಾಡಲು ಸಾಧ್ಯವಾಗುತ್ತದೆ. ಪ್ರಕತಿ ನಾಶದಿಂದ ಜೀವ ಸಂಕುಲಕ್ಕೆ ಆಪತ್ತು ಕಟ್ಟಿಟ್ಟ ಬುತ್ತಿ. ಸಸಿ ನೆಡುವ ಕಾರ್ಯಕ್ರಮಗಳು ಕೇವಲ ಪರಿಸರ ದಿನಾಚರಣೆ, ದಾಖಲೆಗಾಗಿ ಸೀಮಿತವಾಗದೆ ವರ್ಷವಿಡೀ ಸಸಿಗಳನ್ನು ನೆಟ್ಟು ಲಾಲನೆ ಪಾಲನೆ ಮಾಡಬೇಕ ಎಂದು ಕರೆ ನೀಡಿದರು.
ಸಾನ್ನಿಧ್ಯ ವಹಿಸಿದ್ದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಪ್ರಕತಿ ಮತ್ತು ಪರಿಸರದಲ್ಲಿ ಅದ್ಭುತ ಶಕ್ತಿ ಅಡಗಿದೆ. ಬಸವಾದಿ ಶರಣರ ಅನುಭಾವದಿಂದ ರಚನೆಗೊಂಡ ವಚನ ಸಾಹಿತ್ಯ ಪ್ರಕತಿ, ಪರಿಸರದಲ್ಲಿ ಹುಟ್ಟಿಕೊಂಡಿದೆ. ಪ್ರಕತಿ ಮಡಿಲಿನಲ್ಲಿ ಬುದ್ಧನಿಗೆ ಜ್ಞಾನೋದಯ ಆಗಿತ್ತು ಎಂಬುದನ್ನು ಇತಿಹಾಸದಿಂದ ತಿಳಿದು ಬರುತ್ತದೆ. ಹೀಗಾಗಿ ಅಂತಹ ಪ್ರಕತಿ ಮತ್ತು ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಸಿವಿಲ್​ ನ್ಯಾಯಾಧೀಶ ದೇಶಭೂಷಣ ಕೌಜಲಗಿ ಅವರು ಬಸವ ಗುರುವಿನ ಪೂಜೆ ನೆರವೇರಿಸಿದರು. ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಸಚಿನ್​ ಪಾಟೀಲ್​ ಅಧ್ಯತೆ ವಹಿಸಿದ್ದರು. ರಾಜ್ಯ ಮಕ್ಕಳ ಹಕ್ಕುಗಳ ರಣಾ ಆಯೋಗದ ನಿಕಟಪೂರ್ವ ಅಧ್ಯ ಶಶಿಧರ ಕೋಸಂಬೆ, ತಾಲೂಕು ವಕೀಲರ ಸಂದ ಅಧ್ಯ ಮಹೇಶ ರಾಚೋಟೆ, ಉಪಾಧ್ಯ ಮಕರಂದ ಮಾನಕಾರಿ, ಸಹ ಕಾರ್ಯದರ್ಶಿ ನೀಲಕಂಠ ಬಿರಾದಾರ್​, ಗುರುಕುಲ ಆಡಳಿತಾಧಿಕಾರಿ ಮೋಹನರಡ್ಡಿ ಇತರರಿದ್ದರು. ಲಕ್ಷ್ಮಣ ಮೇತ್ರೆ ನಿರೂಪಣೆ ಮಾಡಿ ವಂದಿಸಿದರು.
"

ಪರಿಸರ ಸಂರಣೆ ಪ್ರತಿಯೊಬ್ಬರ ಜವಾಬ್ದಾರಿ. ವಿದ್ಯಾರ್ಥಿಗಳು ತಮ್ಮ ಜನ್ಮದಿನ, ಹಬ್ಬ ಹರಿದಿನಗಳಂದು ಮನೆ ಪರಿಸರ, ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಿ ಹಸಿರುಮಯ ವಾತಾವರಣ ನಿರ್ಮಿಸುವ ಸಂಕಲ್ಪ ತೊಡಬೇಕು.

— > ಶ್ರೀ ಗುರುಬಸವ ಪಟ್ಟದ್ದೇವರು ಹಿರೇಮಠ ಸಂಸ್ಥಾನ ಭಾಲ್ಕಿ
"

ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಕಾನೂನು ಅರಿವು ಹೊಂದುವ ಅಗತ್ಯವಿದೆ. ಕಾನೂನಿನ ಅರಿವಿನಿಂದ ಹಕ್ಕುಗಳ ರಣೆಯಾಗಲಿದೆ. ಜವಾಬ್ದಾರಿಯುತ ಪ್ರಜೆಗಳಾಗಲು ಮತ್ತು ಅಪರಾಧಗಳಿಂದ ದೂರವಿರಲು ಸಹಾಯಕವಾಗುತ್ತದೆ.

— > ರಾಜಶೇಖರ ಹರಸೂರ ಹಿರಿಯ ಶ್ರೇಣಿ ನ್ಯಾಯಾಧೀಶ, ಭಾಲ್ಕಿ



ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net