ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಲಿ

Let's develop leadership qualities in children
Let's develop leadership qualities in children
Published on
ಚಿಕ್ಕನಾಯಕನಹಳ್ಳಿ: ಶಿಬಿರಗಳಲ್ಲಿ ವಿದ್ಯಾರ್ಥಿಗಳು ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಶಾಸಕ ಸಿ.ಬಿ.ಸುರೇಶ್​ ಬಾಬು ತಿಳಿಸಿದರು.
ತಾಲೂಕಿನ ಹೆಸರಹಳ್ಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿದ್ದ 2025-&26ನೇ ಸಾಲಿನ ಸಮಾಜ ಕಾರ್ಯ ಶಿಬಿರ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಶಿಬಿರ ಉದ್ಘಾಟಿಸಿ ಮಾತನಾಡಿ, ಶಿಬಿರಾರ್ಥಿಗಳು ಶಿಸ್ತಿನಿಂದ ಕಲಿಯಬೇಕು. ಎಲ್ಲರೂ ಒಟ್ಟಾಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು, ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳು ಬೆಳೆಸಿಕೊಳ್ಳಬೇಕು ಎಂದರು.
ಪ್ರಾಂಶುಪಾಲೆ ಡಾ.ಎಂ.ಜಿ.ಜ್ಯೋತಿ ಮಾತನಾಡಿ, ಶಾಸಕರ ಮಾರ್ಗದರ್ಶನದೊಂದಿಗೆ ಈ ಶಿಬಿರ ನಡೆಯುತ್ತಿದೆ. ಶಿಬಿರಾರ್ಥಿಗಳು ಉತ್ತಮ ನಡವಳಿಕೆ ಯಿಂದ ಸಮುದಾಯದಲ್ಲಿ ವರ್ತಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net