ರೈತರ ಹಿತಕ್ಕಾಗಿ ಯೋಜನೆ ರೂಪಿಸಲಿ

ಬೈಲಹೊಂಗಲದಲ್ಲಿ ಹಮ್ಮಿಕೊಂಡಿದ್ದ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ವಿಶ್ವನಾಥ ಪಾಟೀಲ, ನಿಜಲಿಂಗೇಶ್ವರ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಅಮರಸಿದ್ಧೇಶ್ವರ ಸ್ವಾಮೀಜಿ, ಪ್ರಭಾ ಅಕ್ಕನವರು ಇತರರಿದ್ದರು.
ಬೈಲಹೊಂಗಲದಲ್ಲಿ ಹಮ್ಮಿಕೊಂಡಿದ್ದ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ವಿಶ್ವನಾಥ ಪಾಟೀಲ, ನಿಜಲಿಂಗೇಶ್ವರ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಅಮರಸಿದ್ಧೇಶ್ವರ ಸ್ವಾಮೀಜಿ, ಪ್ರಭಾ ಅಕ್ಕನವರು ಇತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಬೈಲಹೊಂಗಲ
ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗೆ ಯೋಜನೆ ರೂಪಿಸಿ ಅವರ ಹಿತ ಕಾಪಾಡಬೇಕು ಎಂದು ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.
ಅಖಂಡ ಕರ್ನಾಟಕ ರಾಜ್ಯ ರೈತ ಸಂದ ಬೈಲಹೊಂಗಲ ಟಕದ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ 46ನೇ ರೈತ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಮೂಲಕ ಶ್ರಮಕ್ಕೆ ತಕ್ಕ ಲ ನೀಡಬೇಕು. ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸುವುದಲ್ಲದೆ, ವಿವಿಧ ನೀರಾವರಿ ಯೋಜನೆ ಜಾರಿಗೊಳಿಸಬೇಕು. ರೈತ ಸಂಟನೆಗಳೊಂದಿಗೆ ಸದಾ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.
ಮಾಜಿ ಸಚಿವ ಶಶಿಕಾಂತ ನಾಯಕ ಮಾತನಾಡಿ, ರೈತರು ತಮ್ಮ ಹಕ್ಕು ಪಡೆಯಲು ಹೋರಾಟ ಮಾಡುವ ಅನಿವಾರ್ಯತೆ ಬಾರದಂತೆ ಎಲ್ಲರೂ ನೋಡಿಕೊಳ್ಳಬೇಕು ಎಂದರು.
ನಿಡಸೋಸಿ ನಿಜಲಿಂಗೇಶ್ವರ ಸ್ವಾಮೀಜಿ, ರುದ್ರಾಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ರೈತ ಒಕ್ಕದಿದ್ದರೆ ಬಿಕ್ಕುವುದು ಜಗವೆಲ್ಲ. ಈ ಗಾದೆ ಮಾತಿನಂತೆ ರೈತರ ಪರ ಕಾಳಜಿ ವಹಿಸಬೇಕು. ಯುವಕರು ಕೃಷಿಗೆ ಒಲವು ನೀಡಬೇಕೆಂದರು.
ಸಂಟನೆೆ ರಾಜ್ಯ ಗೌರವ ಅಧ್ಯ ಮಲ್ಲಿಕಾರ್ಜುನ ವಾಲಿ ಮಾತನಾಡಿದರು. ರೈತ ಮುಖಂಡ ಶಿವಾನಂದ ಇಂಚಲ, ಅಂಕಲಗಿ ಅಮರಸಿದ್ಧೇಶ್ವರ ಸ್ವಾಮೀಜಿ, ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಪ್ರಭಾ ಅಕ್ಕನವರು, ವೀರಯ್ಯ ಸ್ವಾಮೀಜಿ, ಡಾ.ಮಹಾಂತಯ್ಯಶಾಸಿ ಆರಾದ್ರಿಮಠ, ಮಾಜಿ ಶಾಸಕ ಮಹಾಂತೇಶ ದೊಡಗೌಡರ, ಉದ್ಯಮಿ ವಿಜಯ ಮೆಟಗುಡ್ಡ, ಡಿಸಿಸಿ ಬ್ಯಾಂಕ್​ ನಿರ್ದೇಶಕ ನಾನಾಸಾಹೇಬ ಪಾಟೀಲ, ಸಂಟನೆೆ ಗೌರವಾಧ್ಯ ಸಿದ್ದನಗೌಡ ಪಾಟೀಲ, ಅಧ್ಯಕ್ಷ ಕೆ.ಎಸ್​.ಸುಧೀರಕುಮಾರ, ಮಹಿಳಾ ಟಕದ ಅಧ್ಯೆ ಶಾಂತಮ್ಮ ಚಿತ್ರದುರ್ಗ, ಜಿಲ್ಲಾಧ್ಯ ಮಲ್ಲಿಕಾರ್ಜುನ ಹುಂಬಿ, ಮುಖಂಡ ಅಪ್ಪಾಸಾಬ ಲಕ್ಕುಂಡಿ, ನಿಂಗಮ್ಮ ಮೆಸೂರ, ಉಳವಪ್ಪ ಒಡೆಯರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net