ಗ್ರಂಥಾಲಯ ಜ್ಞಾನ ಚಿಂತನೆ ಕೇಂದ್ರ

ಕಲಬುರಗಿಯ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ದಶರಥ ಮೇತ್ರೆ, ಡಾ.ಪ್ರದಿಪಕುಮಾರ, ಡಾ.ದೈವತಾಬಾಯಿ ಇತರರಿದ್ದರು.
ಕಲಬುರಗಿಯ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ದಶರಥ ಮೇತ್ರೆ, ಡಾ.ಪ್ರದಿಪಕುಮಾರ, ಡಾ.ದೈವತಾಬಾಯಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ.ಪ್ರದಿಪಕುಮಾರ ಅನಿಸಿಕೆ
  • ಶರಣಬಸವೇಶ್ವರ ವಾಣಿಜ್ಯ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ
ಕಲಬುರಗಿ: ಗ್ರಂಥಾಲಯ ಕೇವಲ ಪುಸ್ತಕಗಳ ಸಂಗ್ರಹಾಲಯವಲ್ಲ, ಜ್ಞಾನ, ಚಿಂತನೆ ಹಾಗೂ ಜೀವನಪರ್ಯಂತ ಕಲಿಕೆಯ ಕೇಂದ್ರವಾಗಿದೆ ಎಂದು ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಗ್ರಂಥಪಾಲಕ ಡಾ.ಪ್ರದಿಪಕುಮಾರ ಡಿ. ಹೇಳಿದರು.
ನಗರದ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಂಥಪಾಲಕರ ದಿನ ಮತ್ತು ಭಾರತೀಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ.ಎಸ್​.ಆರ್​. ರಂಗನಾಥನ್​ ಅವರ 134ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಡಿಜಿಟಲ್​ ಯುಗದಲ್ಲಿ ಇ-ಪುಸ್ತಕ, ಇ-ಜರ್ನಲ್​, ಡೇಟಾಬೇಸ್​ ಹಾಗೂ ವಿವಿಧ ಡಿಜಿಟಲ್​ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಆನ್​ಲೈನ್​ ಶೈಕ್ಷಣಿಕ ಸಂಪನ್ಮೂಲ ಬಳಸಿ ಜ್ಞಾನ ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯ ಡಾ.ದಶರಥ ಮೇತ್ರೆ ಮಾತನಾಡಿ, ವಿದ್ಯಾರ್ಥಿಗಳು ಉಲ್ಲೇಖ ಗ್ರಂಥಗಳನ್ನು ಓದುವ, ದಿನಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಖರೀದಿಸಿ ಓದುವ ಮತ್ತು ನಿಯಮಿತವಾಗಿ ಗ್ರಂಥಾಲಯಕ್ಕೆ ಭೇಟಿ ನೀಡಿ ಪ್ರಚಲಿತ ವಿದ್ಯಮಾನಗಳ ಅರಿವು ಹೆಚ್ಚಿಸಿಕೊಂಡು ಸ್ವತಂತ್ರ್ಯ ಚಿಂತನಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾಲೇಜಿನ ಗ್ರಂಥಪಾಲಕಿ ಡಾ.ದೈವತಾಬಾಯಿ ನಿರೂಪಣೆ ಮಾಡಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net