ಬೆಂಗಳೂರು ನಗರ, ಬೆಂ. ದಕ್ಷಿಣ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಧಾರವಾಡ, ಮೈಸೂರು, ದಾವಣಗೆರೆ ಸೇರಿ ರಾಜ್ಯದಲ್ಲಿ 15 ಲಿಡ್ಕರ್ ಮಳಿಗೆಗಳಲ್ಲಿ ಕೊಲ್ಹಾಪುರಿ ಪಾದರಕ್ಷೆ ಇತ್ಯಾದಿ ಚರ್ಮದ ಉತ್ಪನ್ನಗಳ ಮಾರಾಟ ಮಾಡಲಾಗುತ್ತಿದೆ. ಪ್ರತಿ ಮಳಿಗೆಯಿಂದ ನಿತ್ಯ 20 ಸಾವಿರ ರೂ.ಗಿಂತ ಅಧಿಕ ವಹಿವಾಟು ನಡೆಯುತ್ತಿದೆ. ಮಾರುಕಟ್ಟೆಯಲ್ಲಿ ವಿವಿಧ ಕಂಪನಿಗಳ ಸ್ಪರ್ಧೆ ಹಿನ್ನೆಲೆಯಲ್ಲಿ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಅಳವಡಿಸಿಕೊಂಡು ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲೂ ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಜತೆಗೆ, ಸಿಬ್ಬಂದಿ ಕೊರತೆ ಇರುವುದರಿಂದ ಆನ್ಲೈನ್ನಲ್ಲಿ ಮಾರಾಟ ವ್ಯವಸ್ಥೆ ಬಲಪಡಿಸಲು ನಿರ್ಧರಿಸಲಾಗಿದೆ. ಆನ್ಲೈನ್ನಲ್ಲಿ ಉತ್ಪನ್ನಗಳನ್ನು ಮಾರಾಟ ಸಂಬಂಧ ಭಾರತೀಯ ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ವ್ಯವಸ್ಥಾಪಕ ನಿರ್ದೇಶಕಿ ತಿಳಿಸಿದರು.