ಪ್ರಾಮಾಣಿಕ ಸೇವೆಯಿಂದ ಜೀವನ ಸಾರ್ಥಕ

ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಚಾರ್ಯ ಕೆ.ಎಚ್.ಛತ್ರದ ಅವರನ್ನು ಸನ್ಮಾನಿಸಲಾಯಿತು. ಕೊಪ್ಪಳ ವಿವಿ ಕುಲಸಚಿವ ರಮೇಶ, ಪ್ರಾಧ್ಯಾಪಕ ಅಶೋಕ ಕೆಂಚರಡ್ಡಿ, ಸಿಡಿಸಿ ಸದಸ್ಯರಾದ ರಹೇಮಾನ ನಾಯಕ, ವಿರೂಪಾಕ್ಷಯ್ಯ ಗಂದಧ್, ವಿಕಾಸ ಉಳ್ಳಾಗಡ್ಡಿ, ಕಸಾಪ ಹೋಬಳಿ ಘಟಕದ ಅಧ್ಯಕ್ಷ ಮಹಾಂತೇಶ ಛಲವಾದಿ ಇತರರಿದ್ದರು.

Published on
ಯಲಬುರ್ಗಾ: ಸರ್ಕಾರಿ ನೌಕರರು ನಿಷ್ಠೆ, ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ಸುಧೀರ್ ಕೊರ್ಲಳ್ಳಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ನಿವೃತ್ತ ಪ್ರಾಚಾರ್ಯ ಕೆ.ಎಚ್.ಛತ್ರದ ಅವರ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಮೌಲ್ಯ, ಬದ್ಧತೆ, ಕರ್ತವ್ಯ ಪ್ರಜ್ಞೆ ಅಳವಡಿಸಿಕೊಂಡಾಗ ಜನರ ಗೌರವ ಸಂಪಾದಿಸಲು ಸಾಧ್ಯ. ಛತ್ರದ ಅವರು ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳಿಗೆ ಮಾದರಿಯಾಗಿದ್ದಾರೆ ಎಂದರು.
ನಿವೃತ್ತ ಪ್ರಾಚಾರ್ಯ ಕೆ.ಎಚ್.ಛತ್ರದ ಮಾತನಾಡಿ, ಕಡಿಮೆ ವೇತನದಿಂದ ಸೇವೆ ಆರಂಭಿಸಿದರೂ ಶಿಕ್ಷಣ ಕ್ಷೇತ್ರದ ಮೇಲಿನ ಬದ್ಧತೆಯಿಂದ ಕಾರ್ಯನಿರ್ವಹಿಸಿದ್ದೇನೆ. ಅನೇಕ ಸವಾಲುಗಳನ್ನು ಎದುರಿಸಿದರೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿದ್ದೇನೆ ಎಂದು ತಿಳಿಸಿದರು. ಕೆ.ಎಚ್.ಛತ್ರದ ಅವರನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯ ಅಶೋಕ ಕೆಂಚರಡ್ಡಿಗೆ ಅಧಿಕಾರ ಹಸ್ತಾಂತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net