ಪ್ರೌಢಶಾಲೆ ಮುನ್ನಡೆಯಲು ಸ್ಥಳೀಯರು ಆಸ್ಥೆ ವಹಿಸಲಿ

  ಅರಕಲಗೂಡು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನೂತನ ಸರ್ಕಾರಿ ಪ್ರೌಢಶಾಲಾ ಕಟ್ಟಡವನ್ನು ಶಾಸಕ ಎ.ಮಂಜು ಉದ್ಘಾಟಿಸಿದರು. ನಾರಾಯಣ, ರಂಗಸ್ವಾಮಿ, ಕುಮಾರ್ ಇತರರಿದ್ದರು.
ಅರಕಲಗೂಡು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನೂತನ ಸರ್ಕಾರಿ ಪ್ರೌಢಶಾಲಾ ಕಟ್ಟಡವನ್ನು ಶಾಸಕ ಎ.ಮಂಜು ಉದ್ಘಾಟಿಸಿದರು. ನಾರಾಯಣ, ರಂಗಸ್ವಾಮಿ, ಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಲಕ್ಕೂರು ಗ್ರಾಮ
  • ಸರ್ಕಾರಿ ಪ್ರೌಢಶಾಲಾ ಕಟ್ಟಡವನ್ನು ಶಾಸಕ ಎ.ಮಂಜು ಉದ್ಘಾಟಿಸಿದರು
ಅರಕಲಗೂಡು: ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಬುಧವಾರ ನೂತನ ಸರ್ಕಾರಿ ಪ್ರೌಢಶಾಲಾ ಕಟ್ಟಡವನ್ನು ಶಾಸಕ ಎ.ಮಂಜು ಉದ್ಘಾಟಿಸಿದರು.
ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹತ್ತಾರು ಬಾರಿ ಲಕ್ಕೂರು ಗ್ರಾಮಕ್ಕೆ ಸರ್ಕಾರಿ ಪ್ರೌಢಶಾಲೆ ಮಂಜೂರಾತಿಗೆ ಮುಂದಾದಾಗ ಕಾಣದ ವಿಘ್ಞಗಳು ಎದುರಾಗುತ್ತಿದ್ದವು. ಈ ಬಾರಿ ಗ್ರಾಮದ ಕೆಲವು ಮುಖಂಡರು ನನ್ನನ್ನು ಬೆನ್ನತ್ತಿ ಶಾಲೆ ಮಂಜೂರಾತಿಗೆ ಶ್ರಮಪಟ್ಟಿದ್ದಾರೆ. ಜಿಲ್ಲೆಯಲ್ಲಿಯೇ ಲಕ್ಕೂರು ಗ್ರಾಮಕ್ಕೆ ಮಾತ್ರ ಪ್ರೌಢಶಾಲೆ ಆರಂಭಕ್ಕೆ ಮಂಜೂರಾತಿ ಸಿಕ್ಕಿದೆ. ಇದೇ ಆಸಕ್ತಿ ಶಾಲೆಯನ್ನು ಮುನ್ನಡೆಸಿಕೊಂಡು ಹೋಗುವಲ್ಲೂ ಇರಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಸಂಖ್ಯೆ ಇಳಿಕೆ ಕಂಡು ಶಾಲೆಗಳನ್ನು ಮುಚ್ಚುವ ಸಂದರ್ಭದಲ್ಲಿ ಕಷ್ಟಪಟ್ಟು ಈ ಗ್ರಾಮಕ್ಕೆ ಸರ್ಕಾರಿ ಪ್ರೌಢಶಾಲೆಯನ್ನು ತರಲಾಗಿದೆ. ಯಾವುದೇ ಆಸೆ, ಆಮಿಷಗಳಿಗೆ ಜನರು ಮರುಳಾಗದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಸೌಕರ್ಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಲಕ್ಕೂರು ಸರ್ಕಾರಿ ಶಾಲೆಯಲ್ಲಿ ಮಕ್ಕಳ ಮನೆ ಆರಂಭಿಸಿದ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆಗೆ ಮಕ್ಕಳ ದಾಖಲಾತಿ ಹೆಚ್ಚಾಗಿದೆ. ಇಲ್ಲಿ ಕಲಿತ ಮಕ್ಕಳು ಯಾವುದೇ ಕಾರಣಕ್ಕೂ ಖಾಸಗಿ ಶಾಲೆಗಳಿಗೆ ಹೋಗದಂತೆ ಗುಣಮಟ್ಟದ ಶಿಕ್ಷಣ ನೀಡಿ ಪಾಲಕರ ಮನಸ್ಸನ್ನು ಸೆಳೆಯಬೇಕೆಂದು ಶಿಕ್ಷಕರಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾರಾಯಣ, ಅಕ್ಷರ ದಾಸೋಹ ಅಧಿಕಾರಿ ರಂಗಸ್ವಾಮಿ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net