ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಯ ಮನೆ ಮೇಲೆ ಲೋಕಾಯುಕ್ತ ದಾಳಿ! Lokayukta Raid
ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾ ಶಾಕ್
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ಗೆ ಲೋಕಾಯುಕ್ತ ಶಾಕ್
ಸರ್ಫರಾಜ್ ಖಾನ್ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ
ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ ಆರೋಪ ಸರ್ಫರಾಜ್ ಮೇಲಿದೆ
ಬೆಂಗಳೂರು : ಇಂದು (ಡಿ.24) ಬೆಳಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ಗೆ ಲೋಕಾಯುಕ್ತ ಅಧಿಕಾರಿಗಳು ( Lokayukta Raid ) ಬಿಸಿ ಮುಟ್ಟಿಸಿದ್ದಾರೆ.
ಸರ್ಫರಾಜ್ ಖಾನ್ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಹಲಸೂರಿನಲ್ಲಿರುವ ಸರ್ಫರಾಜ್ ನಿವಾಸದ ಮೇಲೆ ದಾಳಿಯಾಗಿದೆ. ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ ಆರೋಪ ಸರ್ಫರಾಜ್ ಮೇಲಿದೆ. ಇದೇ ಕಾರಣಕ್ಕೆ ಈ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ.
ಬೆಂಗಳೂರಿನ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್, ಎಚ್.ಡಿ.ಕೋಟೆಯ ಒಂದು ರೆಸಾರ್ಟ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆಂದು ಸದ್ಯಕ್ಕೆ ತಿಳಿದುಬಂದಿದೆ. ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಸರ್ಫರಾಜ್ ಗೆ ಸೇರಿದ ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
ಅಂದಹಾಗೆ, ಸರ್ಫರಾಜ್ ಖಾನ್ ಅವರು ಜಮೀರ್ ಖಾನ್ ಅವರ ಪರ್ಸನಲ್ ಸೆಕ್ರೆಟರಿ (PA) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಮೇಲೆ ಅಕ್ರಮ ರೆಸಾರ್ಟ್ ನಿರ್ಮಾಣದ ಆರೋಪ ಈ ಹಿಂದೆ ಕೇಳಿಬಂದಿತ್ತು. ಬಿಜೆಪಿ ಈ ಆರೋಪವನ್ನು ಮಾಡಿದೆ. ತಾರಕ ಡ್ಯಾಮ್ ಬಳಿ ಇರುವ ಆಸ್ತಿ RTCಯಲ್ಲಿ ಸರ್ಫರಾಜ್ ಖಾನ್ ಹೆಸರಿನಲ್ಲಿದೆ ಎಂದು ಬಿಜೆಪಿ ಹೇಳಿದೆ.
ಇದಿಷ್ಟೇ ಅಲ್ಲದೆ, ರಾಜೀವ್ ಗಾಂಧಿ ಹೌಸಿಂಗ್ ಯೋಜನೆಯಲ್ಲಿ ಭ್ರಷ್ಟಾಚಾರದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರ ಆಡಿಯೋ ಕ್ಲಿಪ್‌ನಲ್ಲಿ ಸರ್ಫರಾಜ್ ಖಾನ್ ಅವರ ಹೆಸರು ಈ ಹಿಂದೆ ಅಂದರೆ, ಜೂನ್‌ನಲ್ಲಿ ಕೇಳಿಬಂದಿತ್ತು. ಕಾಂಗ್ರೆಸ್ ಶಾಸಕರೇ ಸರ್ಫರಾಜ್ ಖಾನ್ ಹೆಸರು ಹೇಳಿದ್ದರಿಂದ ಸರ್ಕಾರಕ್ಕೆ ಭಾರಿ ಮುಜುಗರವಾಗಿತ್ತು. ಇದೀಗ ಲೋಕಾಯುಕ್ತ ದಾಳಿ ನಡೆದಿರುವುದರಿಂದ ಸರ್ಫರಾಜ್ ಖಾನ್ ಹೆಸರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
ಅಂದಹಾಗೆ, ಸರ್ಫರಾಜ್ ಖಾನ್ ಹಿರಿಯ ಕೆಎಎಸ್ ಅಧಿಕಾರಿಯಾಗಿದ್ದರು. ಯಲಹಂಕ ವಲಯದ ಜಂಟಿ ಆಯುಕ್ತ, BBMP ಘನ ತ್ಯಾಜ್ಯ ವಿಭಾಗದ ಜಂಟಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಸರ್ಕಾರದ ವಿವಿಧ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದ ಸರ್ಫರಾಜ್ ಖಾನ್ ಇದೀಗ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದಾರೆ.