ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ಪ್ರಸಕ್ತ ಸಾಲಿನ ಮಹಾಕವಿ ಕುವೆಂಪು ಪ್ರಶಸ್ತಿಗೆ ಕನ್ನಡಪರ ಹೋರಾಟಗಾರ, ಹಿರಿಯ ಪತ್ರಕರ್ತ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಭಾಜನರಾಗಿದ್ದಾರೆ.
ಪ್ರಶಸ್ತಿಯು 15 ಸಾವಿರ ರೂ. ನಗದು, ಕಂಚಿನ ಫಲಕ ಒಳಗೊಂಡಿರಲಿದೆ. ಜ.19ರಂದು ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಹಿರಿಯ ವಿದ್ವಾಂಸ ಡಾ. ಬಸವರಾಜ ಕಲ್ಗುಡಿ ಪ್ರದಾನ ಮಾಡುವರು ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.
ಮಹಾಕವಿ ಕುವೆಂಪು ಹೆಸರಿನಲ್ಲಿ ಕನ್ನಡ ಜನಶಕ್ತಿ ಕೇಂದ್ರವು ಪ್ರಶಸ್ತಿಯೊಂದನ್ನು ಸ್ಥಾಪಿಸಿ, ಕುವೆಂಪು ಅವರ ಜೀವನಾದರ್ಶಗಳನ್ನು ಪಾಲಿಸಿಕೊಂಡು ನಾಡು-ನುಡಿಗೆ ಅನನ್ಯ ಸೇವೆ ಸಲ್ಲಿಸುತ್ತಿರುವ ನಾಡಿನ ಗಣ್ಯರೊಬ್ಬರನ್ನು ಗುರುತಿಸಿ ಪ್ರತಿ ವರ್ಷ ‘ಮಹಾಕವಿ ಕುವೆಂಪು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.