ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿ

ಚಿಮ್ಮಡ ಗ್ರಾಮದ ರಬಕವಿ ಮಹಾಲಿಂಗಪುರ ರಸ್ತೆಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣ ಶಾಸಕ ಸಿದ್ದು ಸವದಿ ಲೋಕಾರ್ಪಣೆಗೊಳಿಸಿದರು. ಪ್ರಭು ಸ್ವಾಮೀಜಿ, ಪರಶುರಾಮ ಬಸವ್ವಗೋಳ, ಶಂಕರ ಬಟಕುರ್ಕಿ ಇತರರಿದ್ದರು.
ಚಿಮ್ಮಡ ಗ್ರಾಮದ ರಬಕವಿ ಮಹಾಲಿಂಗಪುರ ರಸ್ತೆಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣ ಶಾಸಕ ಸಿದ್ದು ಸವದಿ ಲೋಕಾರ್ಪಣೆಗೊಳಿಸಿದರು. ಪ್ರಭು ಸ್ವಾಮೀಜಿ, ಪರಶುರಾಮ ಬಸವ್ವಗೋಳ, ಶಂಕರ ಬಟಕುರ್ಕಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿದ್ದು ಸವದಿ ಹೇಳಿಕೆ
  • ಚಿಮ್ಮಡದಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
ಚಿಮ್ಮಡ: ಕ್ಷೇತ್ರದಾದ್ಯಂತ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಬಸ್ ಪ್ರಯಾಣಕ್ಕಾಗಿ ಮಳೆಗಾಲ ಹಾಗೂ ಬೇಸಿಗೆಯಲ್ಲಿ ರಸ್ತೆ ಹಾಗೂ ಅಂಗಡಿ ಮುಂಗ್ಗಟುಗಳ ಆಶ್ರಯ ಪಡೆಯುವ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಹಲವಾರು ಗ್ರಾಮ, ಪಟ್ಟಣಗಳಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಗೊಳಿಸಲಾಗಿದ್ದು, ಸಾರ್ವಜನಿಕರು ಸ್ವಚ್ಛತೆ ಕಾಪಾಡುವ ಮೂಲಕ ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಗ್ರಾಮದ ರಬಕವಿ-ಮಹಾಲಿಂಗಪುರ ರಸ್ತೆಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ 10 ಲಕ್ಷ ರೂ. ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣ ಸೋಮವಾರ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಬಹುದಿನಗಳ ಬೇಡಿಕೆಯಾಗಿರುವ ಈ ಬಸ್ ನಿಲ್ದಾಣ ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಲಾಗಿದ್ದು, ಸ್ವಚ್ಛತೆ ಕಾಪಾಡಬೇಕು. ಕ್ಷೇತ್ರವ್ಯಾಪ್ತಿಯಲ್ಲಿ ಇನ್ನೂ ಎಲ್ಲೆಲ್ಲಿ ಅಗತ್ಯವಿದಿಯೋ ಶಾಸಕರ ಹಾಗೂ ಸಂಸದರ ಅನುದಾನದಲ್ಲಿ ಬಸ್ ತಂಗುದಾಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ ಮಾತನಾಡಿದರು. ಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿ.ಪಂ. ಮಾಜಿ ಸದಸ್ಯ ಪರಶುರಾಮ ಬಸವ್ವಗೋಳ, ಗ್ರಾ.ಪಂ.ಮಾಜಿ ಅಧ್ಯಕ್ಷ ಗುರಲಿಂಗಪ್ಪ ಪೂಜಾರಿ, ಬಾಳಪ್ಪ ಹಳಿಂಗಳಿ, ರಾಮಣ್ಣ ಬಗನಾಳ, ರಾಚಯ್ಯ ಮಠಪತಿ, ಬೀರಪ್ಪ ಹಳೆಮನಿ, ಆನಂದ ಕವಟಿ, ಪ್ರಭು ಮುಧೋಳ, ಅವ್ವನಪ್ಪ ಮುಗಳಖೋಡ, ಮಹಾಂತೇಶ ಜಾಲಿಕಟ್ಟಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net