ಅರಕಲಗೂಡು ತಾಲೂಕಿನ ದೊಡ್ಡಹಳ್ಳಿ- ಅಗ್ರಹಾರ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಭೂಮಿ ಪೂಜೆ ನೆರವೇರಿಸಿದರು. ಮಂಜುನಾಥ್, ಸುರೇಶ್, ಬಾಲರಾಜ್, ಪ್ರಸಾದ್, ಶ್ರೀನಿವಾಸ್ ಮತ್ತು ಗ್ರಾಮಸ್ಥರು ಇದ್ದರು.
ಅರಕಲಗೂಡು: ತಾಲೂಕಿನ ದೊಡ್ಡಮಗ್ಗೆ ಹೋಬಳಿಯ ದೊಡ್ಡಹಳ್ಳಿ- ಅಗ್ರಹಾರ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ. ಮಂಜು ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಗ್ರಾಮದ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಭೂಮಿ ಪೂಜೆ ನೆರವೇರಿಸಿದ ರಸ್ತೆ ಕಾಮಗಾರಿಯನ್ನು ನಿಗದಿತ ಗುಣಮಟ್ಟ ಹಾಗೂ ಮಾನದಂಡಗಳಂತೆ ಕೈಗೊಳ್ಳಬೇಕು. ಕಾಮಗಾರಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಗುಣಮಟ್ಟದ ರಸ್ತೆ ನಿರ್ಮಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ರಸ್ತೆ ಅಭಿವೃದ್ಧಿಯಿಂದ ಗ್ರಾಮಸ್ಥರು, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಗ್ರಾಮೀಣ ಪ್ರದೇಶದ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದೆ ಎಂದು ಹೇಳಿದರು.
ಮುಖಂಡರಾದ ಎಂ.ಆರ್. ಮಂಜುನಾಥ್, ಸುರೇಶ್, ಬಾಲರಾಜ್, ಪ್ರಸಾದ್, ಶ್ರೀನಿವಾಸ್ ಮತ್ತು ಗ್ರಾಮಸ್ಥರು ಇದ್ದರು.