ಸೌಲಭ್ಯ ಸದುಪಯೋಗ ಮಾಡಿಕೊಳ್ಳಿ

ಅರಸೀಕೆರೆ ಗ್ರಾಮಾಂತರ ತಾಲೂಕಿನ ಕಸಬಾ ಹೋಬಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ ಶಾಸಕ ಶಿವಲಿಂಗೇಗೌಡ ಉದ್ಘಾಟನೆ ನೆರವೇರಿಸಿದರು ಈ ಸಂದರ್ಭದಲ್ಲಿ ಪ್ರೊಫೆಸರ್ ಕಂಚಿರಾಯ, ಭಾನುಪ್ರಕಾಶ್ ಹಾಗೂ ಇತರರು ಹಾಜರಿದ್ದರು
ಅರಸೀಕೆರೆ ಗ್ರಾಮಾಂತರ ತಾಲೂಕಿನ ಕಸಬಾ ಹೋಬಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ ಶಾಸಕ ಶಿವಲಿಂಗೇಗೌಡ ಉದ್ಘಾಟನೆ ನೆರವೇರಿಸಿದರು ಈ ಸಂದರ್ಭದಲ್ಲಿ ಪ್ರೊಫೆಸರ್ ಕಂಚಿರಾಯ, ಭಾನುಪ್ರಕಾಶ್ ಹಾಗೂ ಇತರರು ಹಾಜರಿದ್ದರು
Published on
ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಸಬಾ ಹೋಬಳಿಯ ಸೊಲ್ಲಾಪುರ ಬಳಿಯಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮವನ್ನು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಉದ್ಘಾಟಿಸಿದರು.

ಅರಸೀಕೆರೆಯಲ್ಲಿ ಇಂಜಿನಿಯರಿಂಗ್ ಕಾಲೇಜು ತೆರೆಯಬೇಕೆಂದು ನಾನು ಮೊದಲ ಬಾರಿ ಶಾಸಕನಾದಾಗಿನಿಂದ ಹೋರಾಟ ಮಾಡಿದ್ದೆ. ಹಲವು ಎಡರು ತೊಡರು, ಸಂಕಷ್ಟಗಳನ್ನೆಲ್ಲಾ ದಾಟಿ ಕೊನೆಗೂ ಈ ಪ್ರಸ್ತುತ ಶೈಕ್ಷಣಿಕ ವರ್ಷ 2025-26 ಸಾಲಿನಲ್ಲಿ ಕಾಲೇಜು ಪ್ರಾರಂಭವಾಗಿದೆ. ಇದರಿಂದ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಪ್ರಸಕ್ತ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಿಗೆ ಒಟ್ಟು 222 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಪ್ರಸ್ತುತ ಆಧುನಿಕ ವಿದ್ಯಮಾನಕ್ಕೆ ಅನುಗುಣವಾಗಿ ಎಐ, ಸಿಎಸ್ ಸೇರಿದಂತೆ ಒಟ್ಟು ನಾಲ್ಕು ಕೋರ್ಸ್‌ಗಳನ್ನು ತೆರೆಯಲಾಗಿದೆ. ಉತ್ತಮ ವಾತಾವರಣದಲ್ಲಿ ಕಾಲೇಜು ನಿರ್ಮಾಣಗೊಂಡಿದ್ದು, ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದ ಇಂಜಿನಿಯರ್‌ಗಳಾಗಿ ರೂಪಗೊಳ್ಳಿ ಎಂದು ಕಿವಿಮಾತು ಹೇಳಿದರು.

ಈ ಕಾಲೇಜಿಗಾಗಿ ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಸ್ಥಾನವನ್ನೂ ಬೇಡ ಎಂದೆ ಎಂದು ಸ್ಮರಿಸಿದರು.
ಇಲ್ಲಿಯೇ ಹಾಸ್ಟೆಲ್ ನಿರ್ಮಾಣ ನಡೆಯುತ್ತಿದ್ದು, ತಾಂತ್ರಿಕ ಕಾರಣಗಳಿಂದ ನಿಧಾನಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಅದೂ ವಿದ್ಯಾರ್ಥಿಗಳಿಗೆ ಶೀಘ್ರ ಲಭ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ.ಎಸ್.ಕಂಚೀರಾಯ, ಇಲ್ಲಿ ಕಾಲೇಜು ಸ್ಥಾಪನೆಗೊಳ್ಳುವಲ್ಲಿ ಶಾಸಕರ ಪಾತ್ರ ಬಹಳ ಮುಖ್ಯವಾಗಿತ್ತು, ಅವರ ಹೋರಾಟದಿಂದ ಇದು ಸಾಧ್ಯವಾಗಿದೆ. ಪ್ರಾರಂಭವಾದ ಪ್ರಥಮ ವರ್ಷದಲ್ಲೇ ಅತ್ಯದಿಕ ವಿದ್ಯಾರ್ಥಿಗಳು ದಾಖಾಲಾಗಿರುವುದು ಹೆಮ್ಮೆಯ ವಿಷಯ ಎಂದರು.

ಈ ಸಂದರ್ಭದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಭಾನುಪ್ರಕಾಶ್, ಕಾಲಾಜಿನ ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net