ತಿಪ್ಪಣ್ಣಪ್ಪ ಕಮಕನೂರ್ ಅವರಿಗೆ ಪೂರ್ಣಾವಧಿ ಎಂಎಲ್ಸಿ ಮಾಡುವಂತೆ ಆಗ್ರಹಿಸಿ ದೆಹಲಿಗೆ ಬುಧವಾರ ನಿಯೋಗ ಹೋಗಿದ್ದ ಅತಿ ಹಿಂದುಳಿದ ಮಠಾಧೀಶರ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಮನವಿ ಸಲ್ಲಿಸಿದರು. ಡಾ.ಪ್ರಣವಾನಂದ ಶ್ರೀಗಳು, ಶ್ರೀ ದೊಡ್ಡೇಂದ್ರ ಸ್ವಾಮೀಜಿ, ಬಸವ ಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ , ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಮಹಾಂತ ಮಹಾಸ್ವಾಮೀಜಿ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಖರ್ಗೆಯವರಿಗೆ ಅತಿಹಿಂದುಳಿದ ಸ್ವಾಮೀಜಿಗಳ ನಿಯೋಗ ಮನವಿ
ಕಲಬುರಗಿ: ಹಿಂದುಳಿದ ಸಮಾಜದ ನಾಯಕ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಪೂರ್ಣಾವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಸಲು ಈ ಬಾರಿ ಅವಕಾಶ ನೀಡಬೇಕು ಎಂದು ಅತಿ ಹಿಂದುಳಿದ ಮಠಾಧೀಶರ ಮಹಾಸಭಾದ ರಾಜ್ಯಾಧ್ಯ ಡಾ. ಪ್ರಣವಾನಂದ ಶ್ರೀಗಳ ನೇತೃತ್ವದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ಮಲ್ಲಿಕಾರ್ಜುನ ಖರ್ಗೆಯವರ ದೆಹಲಿ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದ ಅತಿ ಹಿಂದುಳಿದ ಮಠಾಧೀಶರು, 2019ರಲ್ಲಿ ತಿಪ್ಪಣ್ಣಪ್ಪ ಕಮಕನೂರು ಒಂದು ವರ್ಷದ ಅವಧಿಗೆ ಮಾತ್ರ ವಿಧಾನ ಪರಿಷತ್ ಸದಸ್ಯರಾಗಿದ್ದರು. ನಂತರ 2023ರಲ್ಲಿ ಮೂರು ವರ್ಷದ ಅವಧಿಗೆ ವಿಧಾನ ಪರಿಷತ್ ಸದಸ್ಯರಿದ್ದರು. ಅವರ ಅವಧಿ ಜೂನ್ 30ಕ್ಕೆ ಪೂರ್ಣಗೊಳ್ಳಲಿದೆ. ಕಮಕನೂರು ಗಂಗಾಮತಸ್ಥರಾದರೂ ಹಿಂದುಳಿದ ಸಮಾಜದವರ ಆರ್ಥಿಕ, ಸಾಮಾಜಿಕ, ಶೈಣಿಕ ಮತ್ತು ಧಾರ್ಮಿಕ ಅಭಿವೃದ್ಧಿಗಾಗಿ ಶ್ರಮಿಸಿದ ಒಬ್ಬ ನಿಷ್ಠಾವಂತ ನಾಯಕರು. ಅನೇಕ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸಮರ್ಥವಾಗಿ ಗಮನಸೆಳೆದು ಪರಿಹಾರಕ್ಕೆ ಪ್ರಯತ್ನಿಸಿದ್ದಾರೆ. ಹಿಂದುಳಿದವರ ಮತ ಕ್ರೋಢಿಕರಣದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದವರು ಎಂದು ನಿಯೋಗವು ರ್ಖಗೆಯವರಿಗೆ ಮನವರಿಕೆ ಮಾಡಿದೆ.
ಕಮಕನೂರ ಅವರನ್ನು ಪೂರ್ಣಾವಧಿಗೆ ಮರು ಆಯ್ಕೆ ಮಾಡಬೇಕೆಂದು ನವದೆಹಲಿಯಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ ರ್ಖಗೆಯವರಿಗೂ ಮನವಿ ಸಲ್ಲಿಸಲಾಯಿತು. ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ವಿಶ್ವಕರ್ಮ ಸಮಾಜದ ಶ್ರೀ ದೊಡ್ಡೇಂದ್ರ ಸ್ವಾಮೀಜಿ, ರಾಜ್ಯ ಉಪಾಧ್ಯ ಕುಂಬಾರ ಸಮಾಜದ ಬಸವ ಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ , ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಲಂಬಾಣಿ ಸಮಾಜದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ರಾಜ್ಯ ಉಪಾಧ್ಯ ಮಾದರ ಚೆನ್ನಯ್ಯ ಸಮಾಜದ ಮಹಾಂತ ಮಹಾಸ್ವಾಮೀಜಿ ಇತರರಿದ್ದರು.