ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ

ರಬಕವಿ-ಬನಹಟಿ ತಾಲೂಕಿನ ಜಗದಾಳ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ತಾಪ ಅಧಿಕಾರಿ ಬಸವರಾಜ ಐನಾಪುರ, ಅನೀಲ ಮಾಚಕನೂರ ಇತರರಿದ್ದರು.
ರಬಕವಿ-ಬನಹಟಿ ತಾಲೂಕಿನ ಜಗದಾಳ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ತಾಪ ಅಧಿಕಾರಿ ಬಸವರಾಜ ಐನಾಪುರ, ಅನೀಲ ಮಾಚಕನೂರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿ.ಪಂ. ಸಿಇಒ ಗಜಾನನ ಬಾಲೆ ಭೇಟಿ
  • ಜಗದಾಳ ವಸತಿ ನಿಲಯ ನಿರ್ವಹಣೆಗೆ ಮೆಚ್ಚುಗೆ

ರಬಕವಿ-ಬನಹಟ್ಟಿ: ಸರ್ಕಾರ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕೊಡುವ ಎಲ್ಲ ಸೌಲಭ್ಯಗಳನ್ನು ವಸತಿ ನಿಲಯದಲ್ಲಿ ನೀಡಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಹೇಳಿದರು.

ತಾಲೂಕಿನ ಜಗದಾಳ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಶನಿವಾರ ಭೇಟಿ ನೀಡಿ, ವಿವಿಧ ಸೌಲಭ್ಯಗಳು ಹಾಗೂ ವಸತಿ ನಿಲಯದ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.
ವಸತಿ ನಿಲಯದಲ್ಲಿ ದೊರೆಯುತ್ತಿರುವ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಶಿಕ್ಷಣದ ಮೂಲಕವೇ ಜೀವನದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಸಮಯ ಸದುಪಯೋಗಪಡಿಸಿಕೊಂಡು ಶಿಸ್ತುಬದ್ಧವಾಗಿ ಅಧ್ಯಯನ ಮಾಡುವಂತೆ ತಿಳಿಸಿದರು.
ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಊಟ ಸೇವಿಸಿದ ಗಜಾನನ ಬಾಲೆ, ಆಹಾರದ ಗುಣಮಟ್ಟ, ಅಡುಗೆ ವ್ಯವಸ್ಥೆ, ಕುಡಿಯುವ ನೀರು, ವಸತಿ ಕೊಠಡಿಗಳು, ಸ್ವಚ್ಛತೆ, ಶೌಚಗೃಹ ಸೇರಿ ವಿವಿಧ ಮೂಲ ಬಗ್ಗೆ ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದುಕೊಂಡರು.
ವಸತಿ ನಿಲಯಕ್ಕೆ ಭೇಟಿ ನೀಡಿದ್ದ ಕೆಲವು ಪಾಲಕರೊಂದಿಗೆ ಸಹ ಚರ್ಚಿಸಿ, ಮಕ್ಕಳ ಶಿಕ್ಷಣಕ್ಕೆ ಪೂರಕವಾದ ವಾತಾವರಣ ಕಲ್ಪಿಸಿರುವ ವಸತಿ ನಿಲಯದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹೆಚ್ಚಿಸಲು ಅಗತ್ಯವಿರುವ ಎಲ್ಲ ಸೌಲಭ್ಯ ಸಮರ್ಪಕವಾಗಿ ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ವಸತಿ ನಿಲಯದಲ್ಲಿ ಗುಣಮಟ್ಟದ ವಾತಾವರಣ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಐನಾಪೂರ, ತೋಟಗಾರಿಕೆ ಅಧಿಕಾರಿ ಅನೀಲ ಮಾಚಕನೂರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೇವ ಪಾಸೋಡಿ, ಪಿಡಿಒ ಡಿ.ಕೆ.ಸಾವಳಗಿ, ತಾ.ಪಂ ಸಹಾಯಕ ನಿರ್ದೇಶಕ ಬಸವರಾಜ ಮುನ್ನೊಳ್ಳಿ, ವಸತಿ ನಿಲಯದ ಮೇಲ್ವಿಚಾರಕ ಮಂಜುನಾಥ ಆಲಗೂರ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net