ಜಿಲ್ಲೆಯವರನ್ನೇ ಉಸ್ತುವಾರಿಯನ್ನಾಗಿ ಮಾಡಿ people

ಜಿಲ್ಲೆಯವರನ್ನೇ ಉಸ್ತುವಾರಿಯನ್ನಾಗಿ ಮಾಡಿ people
ಜಿಲ್ಲೆಯವರನ್ನೇ ಉಸ್ತುವಾರಿಯನ್ನಾಗಿ ಮಾಡಿ people
Published on
ಮುಳಬಾಗಿಲು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್​ ಅವರು ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲೆಯ ಕಾಂಗ್ರೆಸ್​ ಶಾಸಕರಲ್ಲಿ ಒಬ್ಬರನ್ನು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ನೀಡಲು ಮುಂದಾಗಬೇಕು ಜೆಡಿಎಸ್​ ಶಾಸಕ ಸಮೃದ್ಧಿ ವಿ. ಮಂಜುನಾಥ್​ ಹೇಳಿದರು. people
ತಾಲೂಕು ಪಂಚಾಯಿತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಪೈಕಿ 4ರಲ್ಲಿ ಕಾಂಗ್ರೆಸ್​ 2ರಲ್ಲಿ ಜೆಡಿಎಸ್​ ಶಾಸಕರಿದ್ದು, ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್​ ಅಧಿಕಾರದಲ್ಲಿದ್ದು, ಈಗ ಜಿಲ್ಲೆಯ ಹಿರಿಯ ಕಾಂಗ್ರೆಸ್​ ಶಾಸಕರಲ್ಲಿ ಒಬ್ಬರಾಗಿರುವ ಬಂಗಾರಪೇಟೆಯ ಎಸ್​. ಎನ್​. ನಾರಾಯಣಸ್ವಾಮಿ 3 ಮೂರು ಬಾರಿ ನಿರಂತರವಾಗಿ ಶಾಸಕರಾಗಿದ್ದು, ಅವರು ಸೇರಿ ಉಳಿದ ಕಾಂಗ್ರೆಸ್​ ಶಾಸಕರಲ್ಲಿ ಒಬ್ಬರನ್ನು ಸಂಪುಟಕ್ಕೆ ತೆಗೆದುಕೊಂಡು ಜಿಲ್ಲೆ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಸ್ಥಳಿಯ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು.
ಉಸ್ತುವಾರಿ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಲತ@ ಜೆಡಿಎಸ್​ ಮತ್ತು ಜನತಾ ಪರಿವಾರದರು. ಅದೇ ರೀತಿ ಹಲವಾರು ಸಚಿವರು ನಮ್ಮ ಮೂಲದವರೇ ಆಗಿದ್ದರೂ ಜನತಾದಳ ನಾಯಕರನ್ನು ತಯಾರಿಸುವ ಫ್ಯಾಕ್ಟರಿ. ಆದರೆ ಈಗ ಡಿ.ಕೆ. ಶಿವಕುಮಾರ್​ ಮುಖ್ಯಮಂತ್ರಿಯಾಗುತ್ತಿದ್ದು, ಹಿಂದೆ ಸಿದ್ದರಾಮಯ್ಯ ಅವರು ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಿಗೆ 800 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದ್ದು, ಇತರ ಮುಖ್ಯಮಂತ್ರಿಗಳು ಇದನ್ನು ಬಿಡುಗಡೆ ಮಾಡಬೇಕು. ನಮ್ಮ ಕ್ಷೇತ್ರಕ್ಕೂ 200 ಕೋಟಿ ಅನುದಾನ ಬಿಡುಗಡೆ ವಿಶ್ವಾಸವಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net