ಜಾನುವಾರುಗಳಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ 1962 ಪಶು ಸಹಾಯವಾಣಿಗೆ ಕರೆ ಮಾಡಿ ಉಚಿತ ಆಂಬುಲೆನ್ಸ್ ಸೇವೆ ಪಡೆದುಕೊಳ್ಳಬಹುದು. ಕಾಲು ಬಾಯಿ ರೋಗವು ಎತ್ತು, ಹೋರಿ, ಹಸು ಹಾಗೂ ಎಮ್ಮೆ ಉಂಟಾದರೆ ಆರ್ಥಿಕ ನಷ್ಟ ಉಂಟಾಗುತ್ತದೆ. ಅಲ್ಲದೆ, ರೋಗದಿಂದ ಗುಣಮುಖವಾದ ಜಾನುವಾರುಗಳಿಗೆ ಗರ್ಭಕಟ್ಟುವಿಕೆಯಲ್ಲಿ ವಿಳಂಬ ಉಂಟಾಗಲಿದೆ. ಜತೆಗೆ ಹಾಲಿನ ಇಳುವರಿ ಕಡಿಮೆಯಾಗುವ ಸಾಧ್ಯತೆಯಿದೆ. 3 ತಿಂಗಳ ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವುದು ಅತ್ಯಗತ್ಯ ಎಂದರು.