ಸಾರ್ವಜನಿಕರಲ್ಲಿ ಯೋಜನೆಗಳ ಅರಿವು ಮೂಡಿಸಿ

ಔರಾದ್​ ತಾಲೂಕಿನ  ನಾಗಮಾರಪಳ್ಳಿ ಗ್ರಾಪಂಗೆ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯ ಸಾಮಾಜಿಕ ಪರಿಶೋಧನಾ ನಿರ್ದೇಶಕ ಸಿ.ಕೆ. ಮಲ್ಲಪ್ಪ ಭೇಟಿ ನೀಡಿದರು. ತಾಪಂ ಇಒ ಕಿರಣ ಪಾಟೀಲ್​, ಎಡಿ ಶಿವಕುಮಾರ ಘಾಟೆ, ನರಸಾರಡ್ಡಿ, ದೇವಿದಾಸ, ಹಣಮಂತ ಮೇತ್ರೆ, ರಾಹುಲ್​ ಕೈವಾರೆ, ಆನಂದ ಕಾಳಗಾಪುರೆ, ಸಂಗೀತಾ ದೇಶಮುಖ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಿ.ಕೆ.ಮಲ್ಲಪ್ಪ ಸಲಹೆ
  • ನಾಗಮಾರಪಳ್ಳಿ ಗ್ರಾಪಂಗೆ ಭೇಟಿ
ಔರಾದ್​: ಗ್ರಾಮ ಪಂಚಾಯತಿಗಳಲ್ಲಿ ಸಾಮಾಜಿಕ ಪರಿಶೋಧನಾ ಪ್ರಕ್ರಿಯೆ ಮೂಲಕ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಅಲ್ಲದೆ ಗ್ರಾಮಸಭೆಗಳ ಮೂಲಕ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯ ಸಾಮಾಜಿಕ ಪರಿಶೋಧನಾ ನಿರ್ದೇಶಕ ಸಿ.ಕೆ.ಮಲ್ಲಪ್ಪ ಹೇಳಿದರು.
ತಾಲೂಕಿನ ನಾಗಮಾರಪಳ್ಳಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿ, ವಿವಿಧ ಯೋಜನೆಗಳ ಅನುಷ್ಠಾನ, ಅನುದಾನದ ಬಳಕೆ, ಕಾಮಗಾರಿಗಳ ಪ್ರಗತಿ, ದಾಖಲಾತಿಗಳ ನಿರ್ವಹಣೆ ಹಾಗೂ ಸಾಮಾಜಿಕ ಪರಿಶೋಧನಾ ವರದಿಗಳ ಕುರಿತು ಮಾಹಿತಿ ಪಡೆದುಕೊಂಡರು.
ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಅರ್ಹ ಫಲಾನುಭವಿಗಳಿಗೆ ತಲುಪುವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಕಿರಣ ಪಾಟೀಲ್​, ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ, ರಾಜ್ಯ ಸಂಪನ್ಮೂಲ ವ್ಯಕ್ತಿ ನರಸಾರಡ್ಡಿ, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ದೇವಿದಾಸ, ಹಣಮಂತ ಮೇತ್ರೆ, ರಾಹುಲ ಕೈವಾರೆ, ತಾಂತ್ರಿಕ ಸಂಯೋಜಕ ಆನಂದ ಕಾಳಗಾಪುರೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಗೀತಾ ದೇಶಮುಖ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net