ಪ್ರಸ್ತುತ ಅದಾನಿ ಏರ್‌ಪೋರ್ಟ್ ಹೋಲ್ಡಿಂಗ್ಸ್ ಲಿ. ಮುಂಬೈ, ಅಹಮದಾಬಾದ್, ಲಕ್ನೋ, ಮಂಗಳೂರು, ಜೈಪುರ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳಲ್ಲಿ ಡ್ಯೂಟಿ-ಫ್ರೀ ಮಳಿಗೆಗಳನ್ನು ನಿರ್ವಹಿಸುತ್ತಿದೆ. ಮೇಕ್ ಮೈ ಟ್ರಿಪ್ ಜೊತೆಗಿನ ಈ ಒಪ್ಪಂದವು ಭಾರತೀಯ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮತ್ತಷ್ಟು ಮೌಲ್ಯವರ್ಧಿತ ಸೇವೆಗಳನ್ನು ಒದಗಿಸಲು ನೆರವಾಗಲಿದೆ. ಮುಂದಿನ ದಿನಗಳಲ್ಲಿ ಈ ಸೇವೆಯಡಿ ಹಂತ - ಹಂತವಾಗಿ ಇನ್ನಷ್ಟು ಹೊಸ ಸೌಲಭ್ಯಗಳನ್ನು ಪರಿಚಯಿಸಲು ಎರಡು ಸಂಸ್ಥೆಗಳು ತೀರ್ಮಾನಿಸಿವೆ, (ಏಜೆನ್ಸೀಸ್).