ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಸಾವು

Man dies after being hit by car while crossing road
Man dies after being hit by car while crossing road
Published on
ಚಿಕ್ಕಬಳ್ಳಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿ ಗಾರೆ ಕೆಲಸಗಾರನೊಬ್ಬ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದಾವಣಗೆರೆಯ ನವೀನ್​ (33) ಮೃತ. ಹೆದ್ದಾರಿ ಬದಿಯ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಈತ ಅಗತ್ಯ ವಸ್ತು ಖರೀದಿಸಲು ಅಂಗಡಿಗೆ ಹೋಗುತ್ತಿದ್ದ ವೇಳೆ ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಕಾರುಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net