ಕೌಟುಂಬಿಕ ವಿಚಾರವಾಗಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಮಾತು ವಿಕೋಪಕ್ಕೆ ಹೋಗಿದ್ದು, ಈ ವೇಳೆ ಸಿಟ್ಟಿಗೆದ್ದ ಸೂಫಿಯಾನ್ ಏಕಾಏಕಿ ನದೀಂಗೆ ಚಾಕುವಿನಿಂದ ಇರಿದಿದ್ದಾನೆ. ಮೊಹ್ಮದ್ನದೀಂ ಕತ್ತಿಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಪೊಲೀಸರು ಸ್ಥಳಿಯರ ನೆರವಿನಿಂದ ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿದರು. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಗೆ ರವಾನಿಸಲಾಗಿದೆ.