ಚಲಿಸುತ್ತಿದ್ದ ಕಾರಿನೊಳಗೆ ಯುವತಿ ಜೊತೆ ಗಲಾಟೆ ಮಾಡಿಕೊಂಡ ಪಾಗಲ್ ಪ್ರೇಮಿ, ಜಟಾಪಟಿಯಿಂದ ಕೆರಳಿ, ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ತಕ್ಷಣವೇ ಕಾರಿನಿಂದ ಹೊರಗಿಳಿದ ರಮ್ಯಾ, ಅಲ್ಲಿಂದ ಓಡಿ ಹೋಗಿದ್ದಾಳೆ. ಬಳಿಕ ಕಾರಿನೊಳಗೆ ಇದ್ದ ನಾಗೇಂದ್ರ, ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಸಜೀವ ದಹನವಾಗಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದ್ದಾಗಿ ವರದಿಗಳು ಉಲ್ಲೇಖಿಸಿವೆ.