ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮಂಕಾಳ ವೈದ್ಯ ಮತ್ತು ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧವಾಗಿ ಆಯ್ಕೆ | Deputy Speaker

ಮಂಕಾಳ ವೈದ್ಯ ಮತ್ತು ಉಮಾಶ್ರೀ
ಮಂಕಾಳ ವೈದ್ಯ ಮತ್ತು ಉಮಾಶ್ರೀ
Published on
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪಸಭಾದ್ಯಕ್ಷರಾಗಿ(Deputy Speaker) ಭಟ್ಕಳ ಕಾಂಗ್ರೆಸ್ ಶಾಸಕ ಮಂಕಾಳ ವೈದ್ಯ ಮತ್ತು ವಿಧಾನಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಸಭಾಧ್ಯಕ್ಷ ಮತ್ತು ಉಪಸಭಾಪತಿ ಸ್ಥಾನಕ್ಕೆ ಇಂದು(ಆ. 18) ಚುನಾವಣೆ ನಿಗದಿ ಮಾಡಲಾಗಿತ್ತು. ನಿನ್ನೆ ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಬೆಳಗ್ಗೆ ವಿಧಾನಸಭೆಯಲ್ಲಿ ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ವೈದ್ಯ ಅವರ ಹೆಸರನ್ನು ಅನುಮೋದಿಸಿದರು.
ಬಳಿಕ ಸದನ ಎಲ್ಲಾ ಸದಸ್ಯರ ಸರ್ವಾನುಮತದಿಂದ ಮಂಕಾಳ ವೈದ್ಯ ಅವರು ಉಪಸಭಾದ್ಯಕ್ಷರಾಗಿ ಆಯ್ಕೆಯಾದರು. ನಂತರ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪ ಸಭಾಧ್ಯಕ್ಷರ ಪೀಠದಲ್ಲಿ ಕೂರಿಸಿದರು.
ಇತ್ತ ವಿಧಾನ ಪರಿಷತ್​ನಲ್ಲೂ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ನ ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಂಟು ಕಾಂಗ್ರೆಸ್ ಸದಸ್ಯರು ಉಮಾಶ್ರೀ ಅವರ ಹೆಸರನ್ನು ಅನುಮೋದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net