ಸಮೀಪದ ಮುತ್ತಗಿ ಗ್ರಾಮದ ಗ್ರಾಮ ಪಂಚಾಯಿತಿಯ ಸೇವಾಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮನರೇಗಾ ಯೋಜನೆಯಡಿ ಪುರುಷ ಮತ್ತು ಮಹಿಳೆಯರಿಬ್ಬರಿಗೂ 370 ರೂ., ಸಮಾನ ಕೂಲಿ ಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದೆ. ಉದ್ಯೋಗ ಚೀಟಿ ಹೊಂದಿದ ಅರ್ಹರು ಯೋಜನೆಯ ಲಾಭ ಪಡೆದುಕೊಳ್ಳಬೇಕು. ಎನ್‌ಎಂಎಂಎಸ್ ತತ್ರಾಂಶದಲ್ಲಿ ದಿನಕ್ಕೆ ಎರಡು ಬಾರಿ ಕಡ್ಡಾಯವಾಗಿ ಮುಖಚಹರೆಯ ಹಾಜರಾತಿ ಪಡೆದು ಪಾರದರ್ಶಕವಾಗಿ ಕೆಲಸ ಮಾಡಬೇಕು. ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿಯೇ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆಯ ಸೌಲಭ್ಯವನ್ನು ಒದಗಿಸಬೇಕೆಂದು ಹೇಳಿದರು.
ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರಿನ ಕೊರತೆ: ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ 95 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ರಣಬಿಸಿಲಿನ ನಡುವೆ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಯಾವುದೇ ನೀರಿನ ಸೌಲಭ್ಯವಾಗಲಿ, ಪ್ರಾಥಮಿಕ ಚಿಕಿತ್ಸೆಯ ಪೆಟ್ಟಿಗೆಯಾಗಲಿ ಇರಲಿಲ್ಲ. ಇದರಿಂದಾಗಿ ಕೆಲ ಕಾರ್ಮಿಕರು ತೀವ್ರ ಬೇಸರ ವ್ಯಕ್ತಪಡಿಸಿದರು. ಸ್ಥಳೀಯ ಸಾರ್ವಜನಿಕ ಕಾಮಗಾರಿಯ ಜತೆಗೆ ಸ್ವಂತ ಗದ್ದೆಗಳಲ್ಲಿ ಕಾಮಗಾರಿ ಕೈಗೊಂಡು ಯೋಜನೆಯ ಲಾಭ ಪಡೆದುಕೊಳ್ಳಿ ಎಂದು ಹೇಳಿದರು.
ತಾಲೂಕು ಯೋಜನಾಧಿಕಾರಿ ಎಂ.ಬಿ.ಸೊನ್ನದ, ಪಿಡಿಒ ಡಿ.ಎ.ಬಿಳೆಕುದರಿ, ಕಾರ್ಯದರ್ಶಿ ವಿಜಯಕುಮಾರ ಅಸ್ಕಿ, ಮೇಲ್ವಿಚಾರಕಿ ಶಾಂತಮ್ಮ ಸಾಸನೂರ, ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ಮಡಿವಾಳಪ್ಪ ಬಿರಾದಾರ, ಪ್ರವೀಣ ಬಾವಿಕಟ್ಟಿ, ವಿಜಯಲಕ್ಷ್ಮೀ ಗುಮ್ಮಶೆಟ್ಟಿ, ಹೇಮಾ ದಳವಾಯಿ ಮತ್ತಿತರರಿದ್ದರು.
"
ಗರ್ಭಿಣಿಯರು, ಅಂಗವಿಕಲರು ಮತ್ತು 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೆಲಸದಲ್ಲಿ ಶೇ.50 ರಷ್ಟು ರಿಯಾಯಿತಿ ಇದೆ. ಇದರ ಲಾಭವನ್ನು ಪಡೆದುಕೊಳ್ಳಬೇಕು. ಬಿಸಿಲಿನ ತಾಪ ಅಧಿಕವಾಗಿದ್ದು ಕಾರ್ಮಿಕರು ಬೆಳಗ್ಗೆ ಬೇಗನೆ ಕೆಲಸಕ್ಕೆ ಹಾಜರಾಗಿ ಮಧ್ಯಾಹ್ನದ ಸಮಯಕ್ಕೆ ಕೆಲಸ ಮುಗಿಸಿ ಮನೆಗೆ ತೆರಳಬೇಕು.
ವೆಂಕಟೇಶ ವಂದಾಲ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ.