ಕ್ಯಾನ್ಸರ್ ಜಾಗೃತಿಗಾಗಿ ಮ್ಯಾರಥಾನ್ ಜೂ. 7ಕ್ಕೆ

Kidwai cancer hospital
Kidwai cancer hospital
Published on

ಪ್ರಮುಖ ಮುಖ್ಯಾಂಶಗಳು

  • * ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಆಯೋಜನೆ
ಬೆಂಗಳೂರು: ಕ್ಯಾನ್ಸರ್ ಸರ್ವೈವರ್ಸ್ ಡೇ ಅಂಗವಾಗಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಭಾನುವಾರ (ಜೂ.7) ಬೆಳಗ್ಗೆ 6 ಗಂಟೆಗೆ ಕ್ಯಾನ್ಸರ್ ವಿರುದ್ಧ ಜಾಗೃತಿ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಪ್ರೋತ್ಸಾಹಿಸಲು ಮ್ಯಾರಥಾನ್ ಹಮ್ಮಿಕೊಂಡಿದೆ. ನಗರದ ಕಂಠೀರವ ಕ್ರೀಡಾಂಗಣದಿಂದ ಆರಂಭವಾಗಲಿರುವ ಈ ಮ್ಯಾರಥಾನ್ ಕಸ್ತೂರಬಾ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಕೇಂದ್ರ ಗ್ರಂಥಾಲಯ ರಸ್ತೆಯ ಮೂಲಕ ಪುನಃ ಕಂಠೀರವ ಕ್ರೀಡಾಂಗಣ ತಲುಪಲಿದೆ. ಜಾಥಾದಲ್ಲಿ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕ ಡಾ. ಟಿ. ನವೀನ್ ತಿಳಿಸಿದ್ದಾರೆ. ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಜನರನ್ನು ಜಾಗೃತಗೊಳಿಸಲು ಹಾಗೂ ದೈಹಿಕ ಶಕ್ತಿ, ಮಾನಸಿಕ ಶಾಂತಿ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಮ್ಯಾರಥಾನ್ ಆಯೋಜಿಸಲಾಗಿದೆ. ಸಾಮಾಜಿಕ ಜವಾಬ್ದಾರಿಯೊಂದಿಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಯಾವುದೇ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸಮಯೋಚಿತ ಚಿಕಿತ್ಸೆ ನೀಡುವುದರಿಂದ ಜೀವ ಉಳಿಸಲು ಸಾಧ್ಯ. ಚಿಕಿತ್ಸೆಯ ಅವಧಿಯಲ್ಲಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಚೇತರಿಕೆಗೆ ವೇಗ ನೀಡುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಮ್ಯಾರಥಾನ್ ಉದ್ದೇಶವಾಗಿದೆ ಎಂದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net