ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಮೂರನೇ ಕೈದಿ ಮಸ್ತಾನ್ ಬಂಧನ
ಕೈದಿ ಮಸ್ತಾನ್
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಬೀದರ್ ಪೊಲೀಸರಿಂದ ಕಾರ್ಯಾಚರಣೆ
ಬೀದರ್: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ತಲೆಮರೆಸಿಕೊಂಡಿದ್ದ ಮೂರನೇ ಕೈದಿ ಮಸ್ತಾನ್ ಕಮಲಾಪುರೆ ಎಂಬಾತನನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಬೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಪೊಲೀಸರು ಮಸ್ತಾನ್‌ನನ್ನು ಬಂಧಿಸಿದ್ದಾರೆ.
ಮಸ್ತಾನ್ ಕಮಲಾಪುರೆ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಕಲಬುರಗಿ ಜೈಲಿನಿಂದ ಮೂವರು ಕೈದಿಗಳು ಪರಾರಿಯಾಗಿದ್ದರು. ಈ ಪೈಕಿ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ಆದರೆ ಮಸ್ತಾನ್ ಮಾತ್ರ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ.
ಈತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದರು. ಇದೀಗ ಬೀದರ್ ಪೊಲೀಸರ ಕಾರ್ಯಾಚರಣೆಯಲ್ಲಿ ಇಸ್ಲಾಂಪುರ ಗ್ರಾಮದಲ್ಲಿ ಮಸ್ತಾನ್ ಬಂಧನವಾಗಿದ್ದು, ಆತನನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.