ಮಠ&ಮಾನ್ಯಗಳ ಸಾಮಾಜಿಕ ಸೇವೆ ಪ್ರಶಂಸಾರ್ಹ

ನಯಾನಗರದ ಶ್ರೀ ಸುಖದೇವಾನಂದ ಮಹಾಶಿವಯೋಗೀಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಭಿನವಸಿದ್ದಲಿಂಗ ಸ್ವಾಮೀಜಿ, ಡಾ.ಯತೀಂದ್ರ ಸಿದ್ದರಾಮಯ್ಯ, ಜಿ.ಎಸ್​.ಸಂಗ್ರೇಶಿ, ಶಂಕರ ಮಾಡಲಗಿ ಇತರರು ಇದ್ದರು.
ನಯಾನಗರದ ಶ್ರೀ ಸುಖದೇವಾನಂದ ಮಹಾಶಿವಯೋಗೀಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಭಿನವಸಿದ್ದಲಿಂಗ ಸ್ವಾಮೀಜಿ, ಡಾ.ಯತೀಂದ್ರ ಸಿದ್ದರಾಮಯ್ಯ, ಜಿ.ಎಸ್​.ಸಂಗ್ರೇಶಿ, ಶಂಕರ ಮಾಡಲಗಿ ಇತರರು ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಬೈಲಹೊಂಗಲ
ಇತ್ತೀಚಿನ ದಿನಗಳಲ್ಲಿ ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಪರಿಣಾಮಕಾರಿ ಕಡಿವಾಣ ಬೀಳುತ್ತಿದೆ. ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ
ಇದು ನೆರವಾಗುತ್ತದೆ ಎಂದು ವಿಧಾನ ಪರಿಷತ್​ ಸದಸ್ಯ
ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ತಾಲೂಕಿನ ನಯಾನಗರ ಶ್ರೀ ಸುಖದೇವಾನಂದ ಮಹಾಶಿವಯೋಗೀಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ಸಂಸ್ಥೆ ಹಾಗೂ ಧಾರ್ಮಿಕ ಸಂಟನೆ ಈ ರೀತಿಯ ಕಾರ್ಯಕ್ರಮ ಹೆಚ್ಚಾಗಿ ಆಯೋಜಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಿರುವುದು ಶ್ಲಾನೀಯ ಎಂದರು.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆಹ್ವಾನಿಸಲಾಗಿದ್ದರೂ, ಅವರ ಕಾರ್ಯಒತ್ತಡದ ಹಿನ್ನೆಲೆಯಲ್ಲಿ ನಾನು ಉದ್ಘಾಟನೆ ನೆರವೇರಿಸಿದ್ದೇನೆ. ರಾಜ್ಯದ ಅಭಿವದ್ಧಿ, ಉತ್ತಮ ಮಳೆಬೆಳೆ ಮತ್ತು ಸುಭಿತೆಗಾಗಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್​.ಸಂಗ್ರೇಶಿ ಮಾತನಾಡಿ, ಮಠ, ಮಾನ್ಯಗಳು ಜನತೆಯ ಕಲ್ಯಾಣಕ್ಕಾಗಿ ಮಹತ್ತರವಾದ ಕಾರ್ಯನಿರ್ವಹಿಸುತ್ತಿವೆ. ಜನತೆ ಸದಾ ಮಠ, ಮಾನ್ಯಗಳಿಗೆ ಸಹಕಾರ ನೀಡುತ್ತಾ, ಧಾರ್ಮಿಕತೆಯತ್ತ ಒಲವು ತೋರಬೇಕು ಇದರಿಂದ ಶಾಂತಿ ನೆಲೆಸಲು ಸಾಧ್ಯ ಎಂದರು. ಸುಖದೇವಾನಂದ ಮಠದ ಅಭಿನವ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾಂಗ್ರೆಸ್​ ಮುಖಂಡ ಬಸವರಾಜ ಕೌಜಲಗಿ, ಗ್ಯಾರಂಟಿ ಸಮಿತಿ ಅಧ್ಯ ಡಾ.ಮಹಾಂತೇಶ ಕಳ್ಳಿಬಡ್ಡಿ, ಜೆಡಿಎಸ್​ ಜಿಲ್ಲಾಧ್ಯ ಶಂಕರ ಮಾಡಲಗಿ, ಅಡಿವೆಪ್ಪ ಅಸುಂಡಿ, ಈರಯ್ಯ ಹಿರೇಮಠ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net