ಪಂಚ ಗ್ಯಾರಂಟಿಗಳು ನೈಜ ಲಾನುಭವಿಗೆ ತಲುಪಲಿ

May the five guarantees reach the real user.
May the five guarantees reach the real user.
Published on
ಶಿಡ್ಲಘಟ್ಟ: ಗ್ಯಾರಂಟಿ ಯೋಜನೆಗಳ ಸವಲತ್ತುಗಳು ನೈಜ ಫಲಾನುಭವಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತಷ್ಟು ದಕ್ಷತೆ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಾಪಂ ಇಒ ಆರ್​.ಹೇಮಾವತಿ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ಸಮನ್ವಯತೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದರು.
ಗೃಹಲ್ಮ ಮತ್ತು ಗೃಹಜ್ಯೋತಿ ಯೋಜನೆಗಳ ಸಮಗ್ರ ಪರಿಷ್ಕರಣೆ ಹಾಗೂ ಅನರ್ಹರು ಸೌಲಭ್ಯ ಪಡೆಯುತ್ತಿದ್ದರೆ ತಡೆ ಹಿಡಿಯಬೇಕು. ಕೇವಲ ಅರ್ಹರಿಗೆ ಮಾತ್ರ ಯೋಜನೆಗಳನ್ನು ತಲುಪಿಸುವ ಕೆಲಸವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಹಾಗೂ ತಾಲೂಕು ಮಾರ್ಗದಲ್ಲಿ ಸಂಚರಿಸುವ ಬಸ್​ಗಳು ನಿಗದಿತ ಸಮಯಕ್ಕೆ ಸರಿಯಾಗಿ ಸಂಚಾರ ಮಾಡಬೇಕು. ಎರಡು ಬಸ್​ಗಳು ಒಂದೇ ಸಮಯಕ್ಕೆ ಬರುವಂತಹ ಬಸ್​ಗಳ ಸಮಯ ಬದಲಾವಣೆ ಮಾಡಿ ನಿತ್ಯ ಓಡಾಡುವ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುನಿಯಪ್ಪ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಜೀವನ ಮಟ್ಟವನ್ನು ಉತ್ತಮಗೊಳಿಸುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿವೆ ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುನಿಯಪ್ಪ, ಸಿಡಿಪಿಒ ವಿದ್ಯಾ ವಸದ್​, ಬೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೆಎಸ್​ಆರ್​ಟಿಸಿ, ತಾಲೂಕು ಪಂಚಾಯಿತಿ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net