ಸರ್ಕಾರಿ ಯೋಜನೆ ಸದುಪಯೋಗವಾಗಲಿ

ಹುಲಸೂರು ಸಮೀಪದ ಜಾನಾಪುರ ಗ್ರಾಮದಲ್ಲಿ ಶುಕ್ರವಾರ ಶುಕ್ರವಾರ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ವಿಬಿ-ಜಿ ರಾಮ್​ ಜಿ ಯೋಜನೆಯಡಿ ಕೆಲಸ ನೀಡುವಂತೆ ಗ್ರಾಮಸ್ಥರು ಮನವಿಪತ್ರ ಸಲ್ಲಿಸಿದರು. ಸಂಸ್ಥೆ ಸಂಯೋಜಕಿ ಸರುಬಾಯಿ ದೊಡ್ಡಿ, ಡಾ.ಧಮೇಂರ್ದ್ರ ಭೋಸ್ಲೆ, ಮಲ್ಲಿಕಾರ್ಜುನ ಮೇತ್ರೆ ಇತರರಿದ್ದರು.
ಹುಲಸೂರು ಸಮೀಪದ ಜಾನಾಪುರ ಗ್ರಾಮದಲ್ಲಿ ಶುಕ್ರವಾರ ಶುಕ್ರವಾರ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ವಿಬಿ-ಜಿ ರಾಮ್​ ಜಿ ಯೋಜನೆಯಡಿ ಕೆಲಸ ನೀಡುವಂತೆ ಗ್ರಾಮಸ್ಥರು ಮನವಿಪತ್ರ ಸಲ್ಲಿಸಿದರು. ಸಂಸ್ಥೆ ಸಂಯೋಜಕಿ ಸರುಬಾಯಿ ದೊಡ್ಡಿ, ಡಾ.ಧಮೇಂರ್ದ್ರ ಭೋಸ್ಲೆ, ಮಲ್ಲಿಕಾರ್ಜುನ ಮೇತ್ರೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸರುಬಾಯಿ ದೊಡ್ಡಿ ಸಲಹೆ
  • ಜಾನಾಪುರದಲ್ಲಿ ಜನಜಾಗೃತಿ ಕಾರ್ಯಕ್ರಮ
ಹುಲಸೂರು: ಗ್ರಾಮೀಣ ಜನರಿಗೆ ದೊರೆಯುತ್ತಿರುವ ಸರ್ಕಾರದ ವಿವಿಧ ಯೋಜನೆ ಮತ್ತು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸಮರ್ಪಕವಾಗಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ ಆರ್​ಐಎಚ್​ಪಿ ಸಂಯೋಜಕಿ ಸರುಬಾಯಿ ದೊಡ್ಡಿ ಹೇಳಿದರು.
ಜಾನಾಪುರ ಗ್ರಾಮದಲ್ಲಿ ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಹಾಗೂ ಧನ್ನೂರ(ಕೆ) ಗ್ರಾಪಂ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸಂಸ್ಥೆ ಕಳೆದ 42 ವರ್ಷಗಳಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗ್ರಾಮೀಣ ಸಮುದಾಯದ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರು, ಮಕ್ಕಳು, ಯುವಜನರು ಹಾಗೂ ಗ್ರಾಮೀಣ ಕುಟುಂಬಗಳ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು.
ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಗ್ರಾಮಸ್ಥರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಯೋಜನೆಗಳ ಕುರಿತು ನೇರ ಮಾಹಿತಿ ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.
ಸಿಆರ್​ ಪಿ ಡಾ.ಧಮೇಂರ್ದ್ರ ಭೋಸ್ಲೆ, ಸರ್ಕಾರಿ ನೌಕರರ ಸಂಘದ ಮಾಜಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮೇತ್ರೆ ಮಾತನಾಡಿದರು. ಪ್ರಮುಖರಾದ ಬಸಪ್ಪ, ಗಣೇಶ ಮೇತ್ರೆ, ಪುಷ್ಪವತಿ, ಶ್ಯಾಮಲಾ, ಪ್ರಿಯಾಂಕಾ ಮೇತ್ರೆ ಇತರರಿದ್ದರು. ಸ್ನೇಹಲತಾ ಮೇತ್ರೆ ಸ್ವಾಗತಿಸಿ ನಿರೂಪಣೆ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net