ಉತ್ತಮ ಭವಿಷ್ಯ ರೂಪಿಸಿಕೊಂಡು ವಿದ್ಯಾರ್ಥಿಗಳು ಸತ್ಪ್ರಜೆಗಳಾಗಲಿ

ಮುರ್ನಾಡು ವಿದ್ಯಾಸಂಸ್ಥೆಯ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಡ್ಲೇರ ತುಳಸಿ ಮೋಹನ್ ಮಾತನಾಡಿದರು.
ಮುರ್ನಾಡು ವಿದ್ಯಾಸಂಸ್ಥೆಯ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಡ್ಲೇರ ತುಳಸಿ ಮೋಹನ್ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕನ್ನಡ ಸಾಹಿತ್ಯ ಪರಿಷತ್ ಮಡಿಕೇರಿ ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್
  • ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಕಾಲೇಜಿನಲ್ಲಿ
ನಾಪೋಕ್ಲು: ವಿದ್ಯಾರ್ಥಿಗಳು ಸದಾ ಚೈತನ್ಯಶೀಲರಾಗಿ ತಮ್ಮಲ್ಲಿರುವ ಕಲೆ ಹಾಗೂ ಪ್ರತಿಭೆಗಳನ್ನು ಪ್ರದರ್ಶಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಸತ್ಪ್ರಜೆಗಳಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಡಿಕೇರಿ ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಹೇಳಿದರು.
ಸಮೀಪದ ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, ವಿದ್ಯಾಭ್ಯಾಸದ ಸಮಯದಲ್ಲಿ ಮಕ್ಕಳು ಓದಿನತ್ತ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಚೌರೀರ ಜಗತ್ ತಿಮ್ಮಯ್ಯ, ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದ ಹಂತ. ಈ ಹಂತದಲ್ಲಿ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ಪ್ರತಿಭೆ ಇದ್ದು, ಅದನ್ನು ಪ್ರದರ್ಶಿಸಲು ವೇದಿಕೆ ಹುಡುಕಬೇಕು ಎಂದು ಹೇಳಿದರು.
ಕಾಲೇಜಿನ ವಾರ್ಷಿಕ ವರದಿಯನ್ನು ಓದುವುದರೊಂದಿಗೆ ಕಾಲೇಜಿನ ಬೆಳವಣಿಗೆಗೆ ಕಾರಣಕರ್ತರಾದ ಸರ್ವರಿಗೂ ಪ್ರಾಂಶುಪಾಲ ಕಲ್ಪನಾ ಸಾಮ್ರಾಟ್ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ , ಖಜಾಂಚಿ ವಿ.ಎ.ಯತೀಶ್, ನಿರ್ದೇಶಕರಾದ ಕೆ.ಜಿ.ರಾಮಮೂರ್ತಿ, ಎಂ.ಕೆ.ಚಂಗಪ್ಪ, ಪಿ.ಎ.ದೇವಯ್ಯ ಇತರರಿದ್ದರು.
ಸಭಾ ಕಾರ್ಯಕ್ರಮದ ನಂತರ ನಡೆದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳ ವಿಜೇತರಿಗೆ ವೇದಿಕೆಯಲ್ಲಿದ್ದ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಅಂತಿಮ ಬಿಕಾಂ ವಿದ್ಯಾರ್ಥಿಗಳಾದ ದಿವಿನ್ ಬೋಪಯ್ಯ ಹಾಗೂ ಆಫೀಫಾ ಉತ್ತಮ ಹೊರ ನಡೆದ ವಿದ್ಯಾರ್ಥಿಗಳು ಎಂಬ ಪ್ರಶಸ್ತಿ ಪಡೆದುಕೊಂಡರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net