ಪ್ರಜಾಪ್ರಭುತ್ವ ಸದೃಢತೆಗೆ ಮಾಧ್ಯಮ ಸಹಕಾರಿ

ಬೀಳಗಿ ಸಮೀಪ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಜೆ.ಟಿ. ಪಾಟೀಲ ಉದ್ಘಾಟಿಸಿದರು. ಮಾಜಿ ಸಚಿವ ಎಸ್.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಚ್.ಆರ್. ನಿರಾಣಿ, ಜಿಲ್ಲಾಧ್ಯಕ್ಷ ಮಹೇಶ್ ಅಂಗಡಿ ಸೇರಿ ಗಣ್ಯರು ಉಪಸ್ಥಿತರಿದ್ದರು.
ಬೀಳಗಿ ಸಮೀಪ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಜೆ.ಟಿ. ಪಾಟೀಲ ಉದ್ಘಾಟಿಸಿದರು. ಮಾಜಿ ಸಚಿವ ಎಸ್.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಚ್.ಆರ್. ನಿರಾಣಿ, ಜಿಲ್ಲಾಧ್ಯಕ್ಷ ಮಹೇಶ್ ಅಂಗಡಿ ಸೇರಿ ಗಣ್ಯರು ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಚಿವ ಎಸ್.ಆರ್. ಪಾಟೀಲ ಅಭಿಮತ
  • ಬೀಳಗಿಯಲ್ಲಿ ಪತ್ರಿಕಾ ದಿನಾಚರಣೆ
ಬೀಳಗಿ: ಪತ್ರಕರ್ತರು ಯಾವುದೇ ಭಯ, ಒತ್ತಡ ಅಥವಾ ಪ್ರಲೋಭನೆಗಳಿಗೆ ಮಣಿಯದೆ ನಿಷ್ಪಕ್ಷಪಾತ, ನಿರ್ಭೀತ ಹಾಗೂ ಸತ್ಯನಿಷ್ಠೆಯಿಂದ ವಾಸ್ತವಾಂಶಗಳನ್ನು ಜನರಿಗೆ ತಲುಪಿಸಬೇಕು ಎಂದು ಮಾಜಿ ಸಚಿವ ಹಾಗೂ ಎಸ್.ಆರ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ಪಟ್ಟಣದ ಸಮೀಪ ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೀಳಗಿ ಘಟಕ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಸದಸ್ಯತ್ವ ಕಾರ್ಡ್ ವಿತರಣೆ, ಪ್ರತಿಭಾ ಪುರಸ್ಕಾರ, ದಿನಪತ್ರಿಕೆ ವಿತರಕರ ಸನ್ಮಾನ ಹಾಗೂ ಪತ್ರಕರ್ತರಿಗೆ ಲೇಖನ ಸಾಮಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾರಂಗವು ಸಮಾಜದ ಕಣ್ಣು ಮತ್ತು ಧ್ವನಿಯಾಗಿದ್ದು, ಪ್ರಜಾಪ್ರಭುತ್ವವನ್ನು ಸದಢಗೊಳಿಸುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಹಟ್ಟಿ ಚಿನ್ನದ ಗಣಿ ಅಧ್ಯಕ್ಷರು ಹಾಗೂ ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ತಾಲೂಕಿನ ಪತ್ರಕರ್ತರು ಬ್ಲ್ಯಾಕ್‌ಮೇಲ್ ತಂತ್ರಗಳಿಗೆ ಒಳಗಾಗದೆ ಜವಾಬ್ದಾರಿಯುತ ಹಾಗೂ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.
ತಾಲೂಕಿನಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಜಾಗ ಕಾಯ್ದಿರಿಸಿದರೆ ತಮ್ಮ ಶಾಸಕರ ನಿಧಿ ಅಥವಾ ಮುಖ್ಯಮಂತ್ರಿ ವಿಶೇಷ ಅನುದಾನದಿಂದ 20 ಲಕ್ಷ ರೂ. ನೆರವು ನೀಡುವುದಾಗಿ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಚ್.ಆರ್. ನಿರಾಣಿ ಮಾತನಾಡಿ, ಪತ್ರಿಕಾರಂಗವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಷ್ಟೇ ಮಹತ್ವದ ಸಂವಿಧಾನಬದ್ಧ ಅಂಗವಾಗಿದೆ. ಸಾರ್ವಜನಿಕರಿಗೆ ನಿಖರ ಮಾಹಿತಿ ತಲುಪಿಸಲು ಹಗಲಿರುಳು ಶ್ರಮಿಸುವ ಪತ್ರಕರ್ತರ ಸೇವೆ ಶ್ಲಾಘನೀಯ ಎಂದು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳು ವಿಶ್ವಾಸಾರ್ಹ ಹಾಗೂ ಜವಾಬ್ದಾರಿಯುತವಾಗಿರುತ್ತವೆ ಎಂದು ತಿಳಿಸಿದರು. ಇದೇ ವೇಳೆ ಕನ್ನಡ ಪತ್ರಿಕೋದ್ಯಮದ ಆರಂಭಿಕ ಇತಿಹಾಸವನ್ನು ಸ್ಮರಿಸಿದರು.
ಗಿರಿಸಾಗರದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಅಂಗಡಿ ಸದಸ್ಯತ್ವ ಕಾರ್ಡ್ ವಿತರಿಸಿದರು. ಸಂಘದ ಅಧ್ಯಕ್ಷ ಸುಭಾಷ ರಾಠೋಡ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಸಮಿತಿ ಸದಸ್ಯ ಈಶ್ವರ ಶೆಟ್ಟರ, ತಹಸೀಲ್ದಾರ್ ವಿನೋದ ಹತ್ತಳಿ, ಸಿಪಿಐ ಹನುಮಂತ ಸನಮನಿ, ಪ್ರಧಾನ ಕಾರ್ಯದರ್ಶಿ ಜೆ.ಎಸ್. ಗಾಣಿಗೇರ, ಜಿಲ್ಲಾ ಸಮಿತಿ ಸದಸ್ಯ ತಿಪ್ಪಣ್ಣ ಚೆಲುವಾದಿ, ಗೌರವಾಧ್ಯಕ್ಷ ಕಿರಣ್ ಬಾಳಗೋಳ ಸೇರಿ ಹಲವರು ಉಪಸ್ಥಿತರಿದ್ದರು.
"

ಬರಗಾಲದ ಸಂಕಷ್ಟದಲ್ಲಿರುವ ರೈತರನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ನನ್ನ ಜನ್ಮದಿನವನ್ನು ಯಾವುದೇ ರೀತಿಯಲ್ಲಿ ಆಚರಿಸದಿರಲು ನಿರ್ಧರಿಸಿದ್ದೇನೆ. ಅಭಿಮಾನಿಗಳು, ಹಿತೈಷಿಗಳು ಹಾಗೂ ಕಾರ್ಯಕರ್ತರು ಶುಭಾಶಯ ಕಾರ್ಯಕ್ರಮಗಳನ್ನು ಆಯೋಜಿಸದೆ ನನ್ನ ನಿರ್ಧಾರಕ್ಕೆ ಸಹಕರಿಸಬೇಕು. ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ನನಗೆ ಅತ್ಯಮೂಲ್ಯ ಉಡುಗೊರೆ. ಎಸ್.ಆರ್. ಪಾಟೀಲ, ಮಾಜಿ ಸಚಿವ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net