ಮಾ.24ಕ್ಕೆ ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಕುರಿತು ಸಭೆ

ಡಾ. ಅಜಯ್ ಸಿಂಗ್
ಡಾ. ಅಜಯ್ ಸಿಂಗ್
Published on
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ಇದೇ ಮಾರ್ಚ್ 24 ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿಯ ಕೋಣೆ ಸಂಖ್ಯೆ 106 ರಲ್ಲಿ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.
ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಶಾಸಕರು, ಸಂಸದರು ಮತ್ತು ವಿಷಯ ತಜ್ಞರು ಭಾಗವಹಿಸಲಿದ್ದು, ಮಂಡಳಿ ಹಾಗೂ ಸರ್ಕಾರದಲ್ಲಿ ಇರುವ ಹಲವು ತೊಡಕುಗಳನ್ನು ನಿವಾರಿಸಲು ಚರ್ಚೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net