ಕಾಳ್ಗಿಚ್ಚು ತಡೆಗಟ್ಟವ ಕುರಿತು ಗ್ರಾಮಸ್ಥರೊಂದಿಗೆ ಸಭೆ

ಹೆಬ್ಬಾಲೆ ಉಪ ವಲಯ ಅರಣ್ಯ ಇಲಾಖೆ ವತಿಯಿಂದ ಮಾನವ ಮತ್ತು ವನ್ಯಜೀವಿ ಸಂಘರ್ಷ ನಿಯಂತ್ರಣ, ಕಾಳ್ಗಿಚ್ಚು ತಡೆಗಟ್ಟವ ಬಗ್ಗೆ ಜಾಗೃತಿ ಕುರಿತು ಚನ್ನೇನಹಳ್ಳಿ ಗ್ರಾಮದಲ್ಲಿ ಸಮಾಲೋಚನಾ ಸಭೆ ನಡೆಯಿತು. ಗುರುಪ್ರಸಾದ್, ಗೋವಿಂದರಾಜ್, ದೇವರಾಜ್, ಸುನಂದಕುಮಾರ್ ಇತರರಿದ್ದರು.

Published on
ಕುಶಾಲನಗರ: ಸೋಮವಾರಪೇಟೆ ತಾಲೂಕು ವಲಯ ಅರಣ್ಯ ಇಲಾಖೆ, ಹೆಬ್ಬಾಲೆ ಉಪ ವಲಯ ಅರಣ್ಯ ಇಲಾಖೆ ವತಿಯಿಂದ ಮಾನವ ಮತ್ತು ವನ್ಯಜೀವಿ ಸಂಘರ್ಷ ನಿಯಂತ್ರಣ, ಕಾಳ್ಗಿಚ್ಚು ತಡೆಗಟ್ಟವ ಬಗ್ಗೆ ಜಾಗೃತಿ ಕುರಿತು ಅರಣ್ಯದಂಚಿನ ಗ್ರಾಮಸ್ಥರೊಂದಿಗೆ ಸಮಾಲೋಚನೆ ಸಭೆ ಚನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆಯಿತು.
ಉಪ ಅರಣ್ಯಾಧಿಕಾರಿ ಗುರುಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ವಿವಿಧ ಮಾಹಿತಿಗಳನ್ನು ನೀಡಲಾಯಿತು. ಸಭೆಯಲ್ಲಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ ಗೋವಿಂದ ರಾಜ್ ಅರಣ್ಯ ಪ್ರದೇಶದ ಪ್ರಾಣಿಗಳಿಂದ ಮಾನವ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು, ಪರಿಸರ ಸಂರಕ್ಷಣೆಯಲ್ಲಿ ವನ್ಯಜೀವಿಗಳ ಪ್ರಾಮುಖ್ಯತೆ ಸೇರಿದಂತೆ ವಿವಿಧ ಹಂತದಲ್ಲಿ ಮಾಹಿತಿ ಒದಗಿಸಲಾಯಿತು.
ಸಭೆಯಲ್ಲಿ ಸ್ಥಳೀಯ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷೆ ಪೂನ್ನಮ್ಮ, ಗ್ರಾಮದ ಪ್ರಮುಖರಾದ ದೇವರಾಜ್, ಸಂಯೋಜಕರಾದ ಸುನಂದ ಕುಮಾರ್, ಮಹಿಳಾ ಸಂಘದ ಸದಸ್ಯರು, ಹಾಡಿ ಮುಖ್ಯಸ್ಥರು, ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net