ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ, ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

 ಬಾಬುರಾವ ಯಡ್ರಾಮಿ
ಬಾಬುರಾವ ಯಡ್ರಾಮಿ
Published on
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೬-೨೭ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ಕಲಬುರಗಿ ಜಿಲ್ಲಾ ಸಮಿತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ ಹಾಗೂ ರಾಜ್ಯ ಸಮಿತಿ ಸದಸ್ಯ ರಾಜಕುಮಾರ ಉದನೂರ ಜಂಟಿಯಾಗಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾ.೧೦ ರಿಂದ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಅರ್ಜಿಗಳನ್ನು ಪಡೆಯಬಹುದು. ಅರ್ಜಿ ನವೀಕರಣ ಅಥವ ನೂತನ ಸದಸ್ಯತ್ವ ಪಡೆಯಲು ಹಿಂದಿನ ವರ್ಷದ ಸಂಘದ ಕಾರ್ಡ್, ಸಂಪಾದಕರು ಅಥವಾ ಮಾಧ್ಯಮ ಸಂಸ್ಥೆಗಳು ನೀಡಿದ ಆದೇಶ ಪ್ರತಿ, ಆಧಾರ್ ಕಾರ್ಡ್, ಎರಡು ಭಾವಚಿತ್ರ ಮತ್ತು ೫೧೦ ರೂ. ಶುಲ್ಕದೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ಮಾಚ್೯ ೨೦ ಸಂಜೆ ಐದು ಗಂಟೆಯೊಳಗಾಗಿ ಅರ್ಜಿ ಭರ್ತಿ ಮಾಡಿ ಸಲ್ಲಿಸುವ ಕೊನೆಯ ದಿನವಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಪ್ರಮಾಣ ಪತ್ರ ಲಗತ್ತಿಸಬೇಕು. ಜತೆಗೆ ಕನಿಷ್ಠ ಎರಡು ವರ್ಷ ಸೇವಾನುಭವ ಹೊಂದಿರುವ ಕುರಿತು ಸಂಸ್ಥೆಗಳಿಂದ ದೃಢಿಕರಣ ಪತ್ರ ಸಲ್ಲಿಸಬೇಕು ಎಂದು ರಾಜ್ಯ ಸಮಿತಿ ಸದಸ್ಯರಾದ ರಾಜಕುಮಾರ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net