ಮಾಯ್ ಭಾರತ ಯುವ ನೋಂದಣಿ ಅಭಿಯಾನ ಆರಂಭ

ಬಾಗಲಕೋಟೆ ಜಿಲ್ಲಾಽಕಾರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಮಾಯ್ ಭಾರತ ಜಿಲ್ಲಾ ಸಲಹಾ ಸಮಿತಿ ಸಭೆ ನಡೆಯಿತು. ಎಡಿಸಿ ಅಶೋಕ ತೇಲಿ, ವಿವಿಧ ಇಲಾಖೆ ಅಽಕಾರಿಗಳು ಇದ್ದರು.
ಬಾಗಲಕೋಟೆ ಜಿಲ್ಲಾಽಕಾರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಮಾಯ್ ಭಾರತ ಜಿಲ್ಲಾ ಸಲಹಾ ಸಮಿತಿ ಸಭೆ ನಡೆಯಿತು. ಎಡಿಸಿ ಅಶೋಕ ತೇಲಿ, ವಿವಿಧ ಇಲಾಖೆ ಅಽಕಾರಿಗಳು ಇದ್ದರು.
Published on
ಬಾಗಲಕೋಟೆ: ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ ಮೇರಾ ಯುವ ಭಾರತ (ಮಾಯ್ ಭಾರತ) ವತಿಯಿಂದ ದೇಶವ್ಯಾಪಿ ನಡೆಯುತ್ತಿರುವ ೫ ಕೋಟಿ ಯುವಕರ ನೋಂದಣಿ ಅಭಿಯಾನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಮಾಯ್ ಭಾರತ ನೋಂದಣಿ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಽಕಾರಿ ಸಂಗಪ್ಪ ಹೇಳಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಸೋಮವಾರ ಮೇರಾ ಭಾರತ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಅಭಿಯಾನದ ಉದ್ದೇಶ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಯುವಕರನ್ನು ಮಾಯ್ ಭಾರತ ಪೋರ್ಟಲ್‌ಗೆ ನೋಂದಾಯಿಸಿ, ಸ್ವಯಂಸೇವೆ, ನಾಯಕತ್ವ ಅಭಿವೃದ್ಧಿ, ಕೌಶಲ್ಯವೃದ್ಧಿ, ಅನುಭವಾಧಾರಿತ ಕಲಿಕೆ, ರಾಷ್ಟç ನಿರ್ಮಾಣ ಹಾಗೂ ಸಮುದಾಯ ಸೇವೆ ಮುಂತಾದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೇರೇಪಿಸುವುದಾಗಿದೆೆ ಎಂದು ತಿಳಿಸಿದರು.
ಯುವಕರ ನೋಂದಣಿಯನ್ನು ಸುಲಭಗೊಳಿಸುವ ಉದ್ದೇಶದಿಂದ ಮಾಯ್ ಭಾರತ ಬಾಗಲಕೋಟೆ ವತಿಯಿಂದ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳು, ಎನ್‌ಎಸ್‌ಎಸ್, ಎನ್‌ಸಿಸಿ ಘಟಕಗಳು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಯುವಕ ಸಂಘಗಳು, ಸರ್ಕಾರಿ ಕಚೇರಿಗಳು ಹಾಗೂ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಿಶೇಷ ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಆಸಕ್ತ ೧೫ ರಿಂದ ೨೯ ವರ್ಷದೊಳಗಿನ ಯುವಕರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಥವಾ ಮಾಯ್ ಭಾರತ ಪೋರ್ಟಲ್‌ಗೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಎಂದರು.
ಮೇರಾ ಯುವ ಭಾರತ ಬಾಗಲಕೋಟೆಯ ಜಿಲ್ಲಾ ಯುವ ಅಽಕಾರಿ ಅಶ್ವಿನಿ ಮಾತನಾಡಿ, ಜಿಲ್ಲೆಯ ಎಲ್ಲಾ ಅರ್ಹ ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮಾಯ್ ಭಾರತಗೆ ನೋಂದಾಯಿಸಿಕೊಳ್ಳುವAತೆ ಮನವಿ ಮಾಡಿದರು. ಜೊತೆಗೆ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳು, ಎನ್‌ಎಸ್‌ಎಸ್, ಎನ್‌ಸಿಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಸ್ವಯಂಸೇವಾ ಸಂಸ್ಥೆಗಳು, ಯುವಕ ಸಂಘಗಳು ಹಾಗೂ ಸ್ವಯಂಸೇವಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಹೆಚ್ಚಿನ ಯುವಕರನ್ನು ನೋಂದಾಯಿಸಲು ಸಹಕರಿಸುವಂತೆ ಕೋರಿದರು. ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿದ ಕಾಲೇಜುಗಳಿಗೆ ಆಗಸ್ಟ ೧೫ ರಂದು
ಸನ್ಮಾನಿಸಲಾಗುವುದೆಂದು ತಿಳಿಸಿದರು.
ನೋಂದಣಿಗಾಗಿ ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ಹಾಗೂ ಮೂಲಭೂತ ವೈಯಕ್ತಿಕ ಮಾಹಿತಿಯಷ್ಟೇ ಸಾಕಾಗುತ್ತದೆ. ಮಾಯ್ ಭಾರತ ವೇದಿಕೆಯ ಮೂಲಕ ಯುವಕರಿಗೆ ಸ್ವಯಂಸೇವಾ ಅವಕಾಶಗಳು, ಇಂಟರ್ನ್ಶಿಪ್‌ಗಳು, ತರಬೇತಿ ಕಾರ್ಯಕ್ರಮಗಳು, ನಾಯಕತ್ವ ಅಭಿವೃದ್ಧಿ, ಪ್ರಮಾಣಪತ್ರಗಳು ಹಾಗೂ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳು ಲಭ್ಯವಾಗುತ್ತವೆ. ಬಾಗಲಕೋಟೆ ಜಿಲ್ಲಾ ಯುವ ಕಚೇರಿ ಜಿಲ್ಲೆಯ ಎಲ್ಲಾ ಯುವಕರು ಹಾಗೂ ಸಂಬAಽತ ಸಂಸ್ಥೆಗಳು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮಾಯ್ ಭಾರತ ನೋಂದಣಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು.
ಸಭೆಯಲ್ಲಿ ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಜಿಪಂ ಮುಖ್ಯ ಯೋಜನಾಽಕಾರಿ ಅಲ್ಲಮಪ್ರಭು ಅಲ್ಲಾಪೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರಪಾದ ಡೂಗನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net